ಪ್ರಮುಖ ಸುದ್ದಿಗಳು

ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ: ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೋ, ಬಿ.ಸಿ.ರೋಡ್

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಿ.ಸಿ.ರೋಡ್ ಪೊಲೀಸ್ ಲೈನ್ ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮಗಳಿಗೆ ಶನಿವಾರ ಬೆಳಗ್ಗೆ ಚಾಲನೆ ನೀಡಿದರು. ದೇವಸ್ಥಾನದ ಅಭಿವೃದ್ಧಿ ಸುಂದರವಾಗಿದ್ದು, ಆಕರ್ಷಣೀಯವಾಗಿದೆ. ಸಮಿತಿ ಮತ್ತು ಸಂಬಂಧಿಸಿದ ಸದಸ್ಯರಿಗೆ ಅಭಿನಂದನೆ, ಭಕ್ತರಿಗೆ ತಾಯಿಯ ಆಶೀರ್ವಾದ ಸದಾ ಇರಲಿ ಎಂದು ಈ ಸಂದರ್ಭ ಅವರು ಶುಭ ಹಾರೈಸಿದರು.

ಇದೇ ವೇಳೆ ಯಾಗಶಾಲೆಯನ್ನು ನಿವೃತ್ತ ತಹಸೀಲ್ದಾರ್ ಕೆ.ಮೋಹನ ರಾವ್ ಉದ್ಘಾಟಿಸಿದರೆ, ಸೇವಾ ಕಚೇರಿಯನ್ನು ಶ್ರೀ ಅಣ್ಣಪ್ಪ ಪಂಜುರ್ಲಿ ಬಂಟ ದೈವಸ್ಥಾನ ಮಂಗ್ಲಿಮಾರ್ ನ ಆಡಳಿತ ಮೊಕ್ತೇಸರರಾದ ರವಿಶಂಕರ ಶೆಟ್ಟಿ ಬಡಾಜೆಗುತ್ತು ಉದ್ಘಾಟಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ ನರಿಕೊಂಬು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ, ಗೌರವಾಧ್ಯಕ್ಷ ಅಶ್ವನಿ ಕುಮಾರ್ ರೈ, ಕಾರ್ಯಾಧ್ಯಕ್ಷ ಸಂಜೀವ ಪೂಜಾರಿ ಗುರುಕೃಪ, ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಐತಪ್ಪ ಪೂಜಾರಿ ಮೊಡಂಕಾಪು, ವ್ಯವಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ದಿನೇಶ್ ಕುಮಾರ್, ಕಾನೂನು ಸಲಹೆಗಾರರಾದ ಉಮೇಶ್ ಕುಮಾರ್ ವೈ, ನರೇಂದ್ರನಾಥ ಭಂಡಾರಿ, ಪ್ರಧಾನ ಅರ್ಚಕ ಮಾದಕಟ್ಟೆ ಈಶ್ವರ ಭಟ್, ಉಪಾಧ್ಯಕ್ಷ ಆನಂದ ಕೆ, ಕೇಪು ಗೌಡ, ಆಡಳಿತ ಸಮಿತಿ ಸದಸ್ಯರಾದ ಕೃಷ್ಣ ಕುಲಾಲ್, ಚಂದ್ರಹಾಸ ಶೆಟ್ಟಿ, ಸದಾಶಿವ ಬಂಗೇರ, ಸೀತಾರಾಮ, ಬಾಲಕೃಷ್ಣ ಗೌಡ, ಜಯಕುಮಾರ್, ಪುಷ್ಪರಾಜ ಶೆಟ್ಟಿ, ಪದ್ಮನಾಭ ಗೌಡ ಕೈಕುಂಜೆ, ಬಾಲಕೃಷ್ಣ ಗೌಡ, ನಾನಾ ಸಮಿತಿಗಳ ಪ್ರಮುಖರಾದ ಇಂದಿರೇಶ್, ಬಿ.ದೇವದಾಸ ಶೆಟ್ಟಿ, ಬೇಬಿ ಕುಂದರ್, ಪುರುಷ ಸಾಲ್ಯಾನ್, ದೇವಪ್ಪ ಕುಲಾಲ್, ಸದಾಶಿವ ಕೈಕಂಬ ಮತ್ತಿತರರು ಉಪಸ್ಥಿತರಿದ್ದರು. ವಿವೇಕ್ ರೈ ಕಾರ್ಯಕ್ರಮ ನಿರ್ವಹಿಸಿದರು.

Harish Mambady

ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Recent Posts