ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಶೀಘ್ರ ಗೈನಕಾಲಜಿಸ್ಟ್ ನೇಮಕ: ಸಚಿವ ದಿನೇಶ್

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಂಟ್ವಾಳಕ್ಕೆ ಭೇಟಿ ನೀಡಿದ ಸಂದರ್ಭ ಬಂಟ್ವಾಳ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಗೈನಕಾಲಜಿಸ್ಟ್ ಹುದ್ದೆ ಖಾಲಿ ಇದ್ದು, ಅಲ್ಲಿ ತಾತ್ಕಾಲಿಕ ನೆಲೆಯಲ್ಲೂ ಯಾರೂ ಬಾರದೇ ಇರುವ ಕಾರಣ ಪ್ರಸೂತಿ ಸಹಿತ ಸ್ತ್ರೀರೋಗಕ್ಕೆ ಸಂಬಂಧಿಸಿದಂತೆ ರೋಗಿಗಳು ಅನ್ಯ ಆಸ್ಪತ್ರೆಗಳನ್ನು ಆಶ್ರಯಿಸುವಂತಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಇದಕ್ಕೆ ಸಂಬಂಧಿಸಿದ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ನಿಯೋಜಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ನೇಮಕಾತಿ ಪ್ರಕ್ರಿಯೆ ಸಂದರ್ಭ ಹುದ್ದೆ ಭರ್ತಿಗೆ ಆದ್ಯತೆ ನೀಡಲಾಗುವುದು ಎಂದರು.

 

About the Author

Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Be the first to comment on "ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಶೀಘ್ರ ಗೈನಕಾಲಜಿಸ್ಟ್ ನೇಮಕ: ಸಚಿವ ದಿನೇಶ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*