ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಶೀಘ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬಂಟ್ವಾಳಕ್ಕೆ ಭೇಟಿ ನೀಡಿದ ಸಂದರ್ಭ ಬಂಟ್ವಾಳ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಗೈನಕಾಲಜಿಸ್ಟ್ ಹುದ್ದೆ ಖಾಲಿ ಇದ್ದು, ಅಲ್ಲಿ ತಾತ್ಕಾಲಿಕ ನೆಲೆಯಲ್ಲೂ ಯಾರೂ ಬಾರದೇ ಇರುವ ಕಾರಣ ಪ್ರಸೂತಿ ಸಹಿತ ಸ್ತ್ರೀರೋಗಕ್ಕೆ ಸಂಬಂಧಿಸಿದಂತೆ ರೋಗಿಗಳು ಅನ್ಯ ಆಸ್ಪತ್ರೆಗಳನ್ನು ಆಶ್ರಯಿಸುವಂತಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಇದಕ್ಕೆ ಸಂಬಂಧಿಸಿದ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ನಿಯೋಜಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ನೇಮಕಾತಿ ಪ್ರಕ್ರಿಯೆ ಸಂದರ್ಭ ಹುದ್ದೆ ಭರ್ತಿಗೆ ಆದ್ಯತೆ ನೀಡಲಾಗುವುದು ಎಂದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…