ಮಂಗಳೂರು ಹೊರವಲಯದ ಹಳೆಯಂಗಡಿ ಸಮೀಪ ಚೇಳ್ಯಾರು ಎಂಬಲ್ಲಿರುವ ಕರಿತೋಟ ಪ್ರದೇಶದಲ್ಲಿರುವ ಅಣೆಕಟ್ಟಿನಲ್ಲಿ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ. ಇವರೆಲ್ಲರೂ ಸುರತ್ಕಲ್ ನ ಖಾಸಗಿ ಹೈಸ್ಕೂಲ್ ವಿದ್ಯಾರ್ಥಿಗಳಾಗಿದ್ದು, ಮಂಗಳವಾರ ಮಧ್ಯಾಹ್ನ ಇಲ್ಲಿಂದ ಹೊರಟು, ಮನೆಗೂ ತೆರಳದೆ ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿತ್ತು. ತಡರಾತ್ರಿ ಇವರ ಶವ ಪತ್ತೆಯಾಗಿದ್ದು, ಕುಟುಂಬ ಸದಸ್ಯರ ರೋದನ ಮುಗಿಲುಮುಟ್ಟಿದೆ.10ನೇ ತರಗತಿಯ ಯಶ್ವಿತ್, ಚಂದ್ರಕಾಂತ್, ನಿರೂಪ್, ಅನ್ವಿತ್ ಮತ್ತು ರಾಘವೇಂದ್ರ ಮೃತಪಟ್ಟ ವಿದ್ಯಾರ್ಥಿಗಳು. ಹತ್ತನೇ ತರಗತಿಗೆ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು, ಮಂಗಳವಾರ ಮಧ್ಯಾಹ್ನ ಸುಮಾರು 1.30ಕ್ಕೆ ಪರೀಕ್ಷೆ ಮುಗಿಸಿ ಶಾಲೆಯಿಂದ ಹೊರಗೆ ತೆರಳಿದ್ದ ಇವರು ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ ನಾಪತ್ತೆ ಪ್ರಕರಣ ದಾಖಲಾಗಿತ್ತು