ಜೇಸಿ ಜೋಡುಮಾರ್ಗ ನೇತ್ರಾವತಿಯಿಂದ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ ನಲ್ಲಿ ತರಬೇತಿ, ಆರೋಗ್ಯ ಮಾಹಿತಿ ಹಾಗೂ ಸನ್ಮಾನ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸುಬ್ರಹ್ಮಣ್ಯ ಪೈ ವಹಿಸಿದ್ದರು. ವಲಯ ಉಪಾಧ್ಯಕ್ಷ ಸನತ್ ಕುಮಾರ್ ನಾಯ್ಕ್ ಅವರು ಘಟಕಾಭಿವೃದ್ಧಿ ಮತ್ತು ನಿರ್ವಹಣೆಯ ಕುರಿತು ತರಬೇತಿಯನ್ನು ನಡೆಸಿಕೊಟ್ಟರು.ಜೇಸಿಯ ಘಟಕದ ನಿರ್ವಹಣೆ ಸಂದರ್ಭ ಎದುರಾಗುವ ಸವಾಲುಗಳು ಹಾಗೂ ಸದಸ್ಯರು ಅದನ್ನು ಸದುಪಯೋಗಪಡಿಸಿಕೊಳ್ಳುವ ವಿಚಾರವಾಗಿ ಅವರು ಮಾಹಿತಿ ನೀಡಿದರು. ಮಹಿಳಾ ದಿನಾಚರಣೆ ಅಂಗವಾಗಿ ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಾಗಾರವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಡಾ. ವಿದ್ಯಾಲಕ್ಷ್ಮಿ ವಿ ಶೆಟ್ಟಿ ನಡೆಸಿಕೊಟ್ಟರು. ಮೆಸ್ಕಾಂ, ಬಿ.ಸಿ.ರೋಡ್ ನಲ್ಲಿ ಮೆಕ್ಯಾನಿಕ್ ಆಗಿ ಹಲವು ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿರುವ ಮಹಮ್ಮದ್ ಅವರಿಗೆ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು.
ನಿಕಟಪೂರ್ವಾಧ್ಯಕ್ಷೆ ಗಾಯತ್ರಿ ಲೋಕೇಶ್ ಶುಭ ಹಾರೈಸಿದರು. ಉಪಾಧ್ಯಕ್ಷರಾದ ಜೀವನ್ ಕುಲಾಲ್, ಜತೆ ಕಾರ್ಯದರ್ಶಿ ದೀಪ್ತಿ ಶ್ರೀನಿಧಿ, ಕೋಶಾಧಿಕಾರಿ ಡಾ. ವಿನಾಯಕ ಕೆ.ಎಸ್, ಸಾಂಸ್ಕೃತಿಕ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಮಹಿಳಾ ಜೇಸಿ ಸಂಯೋಜಕಿ ಸೌಮ್ಯಾ ಹರಿಪ್ರಸಾದ್ ಕುಲಾಲ್, ನಿರ್ದೇಶಕರಾದ ಹರಿಶ್ಚಂದ್ರ ಆಳ್ವ, ಪೂರ್ವಾಧ್ಯಕ್ಷರಾದ ರಾಮಚಂದ್ರ ರಾವ್, ಪಿ.ಎ.ರಹೀಂ, ಪಿ.ಮುಹಮ್ಮದ್, ಹರಿಪ್ರಸಾದ್ ಕುಲಾಲ್, ಶ್ರೀನಿಧಿ ಭಟ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಡಾ. ಧೀರಜ್ ಹೆಬ್ರಿ ವಂದಿಸಿದರು.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…