ಬಂಟ್ವಾಳ

ಪಾಕ್ ಪರ ಘೋಷಣೆ ವಿಚಾರ, ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ವಿಧಾನಸೌಧದ ಮೊಗಸಾಲೆಯಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿ, ಬೆಂಗಳೂರಿನಲ್ಲಿ ಶುಕ್ರವಾರ ಬಾಂಬ್ ಸ್ಫೋಟ ಪ್ರಕರಣ ನಡೆದಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತಳೆದಿರುವ ಮೃದು ಧೋರಣೆಗಳೇ ಕಾರಣ ಎಂದು ಆರೋಪಿಸಿ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ ಫ್ಲೈಓವರ್ ಬಳಿ ಪ್ರತಿಭಟನೆ ಶನಿವಾರ ನಡೆಯಿತು. ವಿಧಾನಪರಿಷತ್ತು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮುಖ್ಯಮಂತ್ರಿಯಾದಿ ರಾಜ್ಯ ಸಚಿವ ಸಂಪುಟದ ಎಲ್ಲ ಸಚಿವರೂ ಪಾಕಿಸ್ತಾನ್ ಪರ ಘೋಷಣೆ ಕೂಗಿರುವವರ ಪರ ಇರುವಂತೆ ಮಾತನಾಡುತ್ತಿದ್ದಾರೆ. ರಾಜ್ಯದ ಪವಿತ್ರವಾದ ವಿಧಾನಸೌಧದ ಮೆಟ್ಟಿಲಲ್ಲಿ ನಿಂತು ಭಾರತ ವಿರೋಧಿ ರಾಷ್ಟ್ರದ ಪರ ಘೋಷಣೆ ಕೂಗಿ ವೀರೋಚಿತವಾಗಿ ಹೋಗುತ್ತಾರೆ ಎಂದರೆ ಪ್ರಜಾಪ್ರಭುತ್ವ ಎಲ್ಲಿಗೆ ಬಂತು ಎಂದು ಪ್ರಶ್ನಿಸಿದ ಅವರು, ಈವರೆಗೂ  ಎಫ್.ಎಸ್.ಎಲ್. ರಿಪೋರ್ಟ್ ಅನ್ನು ಯಾಕೆ ಬಹಿರಂಗಪಡಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಕಾಂಗ್ರೆಸ್ ಓಟ್ ಬ್ಯಾಂಕ್ ಗಾಗಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಪಾಕ್ ಪರವಾಗಿ ಘೋಷಣೆ ಕೂಗಿದವರಿಗೆ ಶಿಕ್ಷೆ ನೀಡದ ಫಲವಾಗಿ ಬೆಂಗಳೂರು ಬಾಂಬ್ ಸ್ಫೋಟದಂಥ ಪ್ರಕರಣಗಳು ನಡೆದಿವೆ ಎಂದರು.

ಈ ಸಂದರ್ಭ ಮಾತನಾಡಿದ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಭಯೋತ್ಪಾದನಾ ತಾಣವಾಗುತ್ತಿರುವುದು ಕಂಡುಬರುತ್ತಿದ್ದು, ಹಳ್ಳಿ, ಪಟ್ಟಣಗಳಲ್ಲೂ ಬಾಂಬ್ ತಯಾರಿಕೆ ಗ್ಯಾರಂಟಿಯ ಇನ್ನೊಂದು ಮುಖ ಎಂದ ಅವರು ಸಿಎಂ ರಾಜೀನಾಮೆಗೆ ಒತ್ತಾಯಿಸಿದರು.

ಮುಖಂಡ ವಿಕಾಸ್ ಪುತ್ತೂರು ಮಾತನಾಡಿ, ಎಫ್.ಎಸ್.ಎಲ್. ರಿಪೋರ್ಟ್ ಬಂದರೂ ಯಾಕೆ ಬಹಿರಂಗಪಡಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಪ್ರಮುಖರಾದ ರಾಮದಾಸ ಬಂಟ್ವಾಳ ಮಾತನಾಡಿ, ಭಾರತ ವಿರೋಧಿ ಘೋಷಣೆ ಕೂಗಿದವರಿಗೆ ಪ್ರೋತ್ಸಾಹ ನೀಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂದರು.

ಬಿಜೆಪಿ ಪ್ರಮುಖರಾದ ದೇವಪ್ಪ ಪೂಜಾರಿ, ಆರ್. ಚೆನ್ನಪ್ಪ ಕೋಟ್ಯಾನ್, ಬಿ.ದೇವದಾಸ ಶೆಟ್ಟಿ, ಸುಲೋಚನಾ ಜಿ.ಕೆ. ಭಟ್, ಡೊಂಬಯ ಅರಳ,  ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಕಿಶೋರ್ ಪಲ್ಲಿಪ್ಪಾಡಿ, ರವೀಶ್ ಶೆಟ್ಟಿ ಕರ್ಕಳ, ದಿನೇಶ್ ಅಮ್ಟೂರು, ವಜ್ರನಾಥ ಕಲ್ಲಡ್ಕ, ಲಖಿತಾ ಆರ್ ಶೆಟ್ಟಿ,  ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲಿಯಾನ್, ಜನಾರ್ದನ ಬೊಂಡಾಲ, ಆನಂದ ಶಂಭೂರು, ಗೋವಿಂದ ಪ್ರಭು, ಹರಿಪ್ರಸಾದ್, ಶುಭಕರ ಶೆಟ್ಟಿ, ಚಿದಾನಂದ ರೈ ಕಕ್ಯ, ಸಂತೋಷ್ ಕೋಟ್ಯಾನ್, ಸಂತೋಷ್ ರಾಯಿಬೆಟ್ಟು, ಕೇಶವ ದೈಪಲ, ರಮನಾಥ ರಾಯಿ, ಕಾರ್ತಿಕ್ ಬಲ್ಲಾಳ್, ರೋನಾಲ್ಡ್ ಡಿಸೋಜ, ವಸಂತ ಕಕ್ಯಪದವು ,ದಿನೇಶ್ ಶೆಟ್ಟಿ ದಂಬೆದಾರ್, ಗಣೇಶ್ ರೈ ಮಾಣಿ, ವಿಜಯ್ ರೈ, ಮೋಹನ್ ಪಿ.ಎಸ್.ಸದಾನಂದ ನಾವೂರ,   ಪ್ರಣಾಮ್ ಅಜ್ಜಿಬೆಟ್ಟು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ