ಬಂಟ್ವಾಳ: ಶನಿವಾರ ಆರಂಭಗೊಂಡ ಮಾಜಿ ಸಚಿವ ಬಿ.ರಮಾನಾಥ ರೈ ಗೌರವಾಧ್ಯಕ್ಷರಾಗಿರುವ ಮುಡೂರು ಪಡೂರು ಜೋಡುಕರೆ ಕಂಬಳ ಸಮಿತಿಯ ಬಂಟ್ವಾಳ ಕಂಬಳದಲ್ಲಿ ಸಂಜೆಯ ವೇಳೆ ಹೊನಲು ಬೆಳಕಿನಲ್ಲಿ ಓಟದ ಕೋಣಗಳ ಸ್ಪರ್ಧೆ ಆಕರ್ಷಕವಾಗಿದ್ದು, ಸೇರಿದ್ದ ಪ್ರೇಕ್ಷಕರ ಪ್ರೋತ್ಸಾಹ ಕಂಬಳ ಕೋಣಗಳ ಓಟಗಾರರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿತು.
ಮಾಜಿ ಸಚಿವ ಬಿ.ರಮಾನಾಥ ರೈ ಜೋಡುಕರೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಂಬಳವನ್ನು ಉದ್ಘಾಟಿಸಿದರು. ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ಧರ್ಮಗುರು ರೆ.ಫಾ. ಫೆಡ್ರಿಕ್ ಮೊಂತೆರೊ ಶುಭ ಹಾರೈಸಿದರು. ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಪ್ರಸ್ತಾವನೆಗೈದರು. ಸ್ಥಳೀಯ ನಾಗಬನದಲ್ಲಿ ಪ್ರಾರ್ಥನೆ ಮಾಡಿ, ಬಳಿಕ ಕಂಬಳದ ಗದ್ದೆಗೆ ಮೆರವಣಿಗೆಯಲ್ಲಿ ಆಗಮಿಸಲಾಯಿತು.
ಇದೇ ವೇಳೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಂಬಳಕ್ಕೆ ಭೇಟಿ ನೀಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್, ಮನಪಾ ಸದಸ್ಯ ಎ.ಸಿ.ವಿನಯರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಉದ್ಯಮಿಗಳಾದ ಕಣಚ್ಚೂರು ಮೋನು, ಮುನಿಯಾಲ್ ಉದಯಕುಮಾರ್ ಶೆಟ್ಟಿ ಜತೆಗಿದ್ದರು. ಉದ್ಘಟನಾ ಸಮಾರಂಭದಲ್ಲಿ ಮಂಗಳೂರು ಮಾಜಿ ಮೇಯರ್ ಶಶಿಧರ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಗೇರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಎಚ್. ಖಾದರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಂಬಳ ಕೋಣಗಳ ಯಜಮಾನರಾದ ಉಮೇಶ್ ಶೆಟ್ಟಿ ಮಾಣಿಸಾಗು, ಲಿಯೋ ಫೆರ್ನಾಂಡೀಸ್ ಸರಪಾಡಿ, ಉದ್ಯಮಿಗಳಾದ ರಘುನಾಥ ಸೋಮಯಾಜಿ, ಲೀಲಾಕ್ಷ ಕರ್ಕೇರ, ಪುರುಷೋತ್ತಮ ಶೆಟ್ಟಿ, ಐತಪ್ಪ ಆಳ್ವ, ಬಾಲಕೃಷ್ಣ ಶೆಟ್ಟಿ, ಪ್ರಮುಖರಾದ ಪ್ರವೀಣ್ ಆಳ್ವ, ಅಬ್ಬಾಸ್ ಆಲಿ, ನಾರಾಯಣ ನಾಯ್ಕ್, ಜೋಕಿಂ ಡಿಸೋಜ, ಜಯಪ್ರಕಾಶ್ ರೈ ಮತ್ತಿತರರು ಉಪಸ್ಥಿತರಿದ್ದರು.
ಕಂಬಳ ಸಮಿತಿ ಸಂಚಾಲಕ ಬಿ.ಪದ್ಮಶೇಖರ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ಎಡ್ತೂರು ರಾಜೀವ ಶೆಟ್ಟಿ, ಕೋಶಾಧಿಕಾರಿ ಫಿಲಿಪ್ ಫ್ರಾಂಕ್, ಉಪಾಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್, ಸುದರ್ಶನ ಜೈನ್, ಅವಿಲ್ ಮಿನೇಜಸ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಎಂ.ಎಸ್. ಮಹಮ್ಮದ್ ಮೊದಲಾದವರು ಇದ್ದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಬಂಟ್ವಾಳ ಕಂಬಳ, ಕೋಣಗಳ ಸ್ಪರ್ಧೆ, ಪ್ರೇಕ್ಷಕರ ಪ್ರೋತ್ಸಾಹ"