ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ ನಿಧನ ಹೊಂದಿದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಮೌನ ಪ್ರಾರ್ಥನೆ ಮಾಡಿ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು. ಈ ಸಂದರ್ಭ ಹಿರಿಯ ಪತ್ರಕರ್ತರಾದ ಗಣೇಶ ಪ್ರಸಾದ ಪಾಂಡೇಲು, ವೆಂಕಟೇಶ ಬಂಟ್ವಾಳ, ಹರೀಶ ಮಾಂಬಾಡಿ, ರತ್ನದೇವ್ ಪುಂಜಾಲಕಟ್ಟೆ. ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ನುಡಿನಮನ ಸಲ್ಲಿಸಿದರು. ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಉಪಾಧ್ಯಕ್ಷ ಯಾದವ ಅಗ್ರಬೈಲ್, ಪತ್ರಕರ್ತರಾದ ಕಿರಣ್ ಸರಪಾಡಿ, ಕಿಶೋರ್ ಪೆರಾಜೆ, ಚಂದ್ರಶೇಖರ ಕಲ್ಮಲೆ ಉಪಸ್ಥಿತರಿದ್ದರು.