ನರಿಕೊಂಬು ಗ್ರಾಮದ ಪಾಣೆಮಂಗಳೂರಿನಲ್ಲಿರುವ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಈಗಾಗಲೇ ಆರಂಭಗೊಂಡಿದ್ದು, ತನ್ನಿಮಿತ್ತವಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆ ಮಂಗಳವಾರ ಮಧ್ಯಾಹ್ನ ಆರಂಭಗೊಂಡಿತು.
ನರಿಕೊಂಬು ದೊಂಪದಬಳಿಯ ನಾಲ್ಕೈತ್ತಾಯ ದೈವಸ್ಥಾನದಿಂದ ಹೊರಟ ಮೆರವಣಿಗೆ ನರಿಕೊಂಬು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಿಂದ ಕುರ್ಚಿಪಲ್ಲ, ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ, ಪಾಣೆಮಂಗಳೂರು ಶ್ರೀ ವೀರವಿಠಲ ದೇವಸ್ಥಾನದಿಂದ ಶ್ರೀ ಭಯಂಕೇಶ್ವರ ಸದಾಶಿವ ಕ್ಷೇತ್ರಕ್ಕೆ ತಲುಪುವ ಮೆರವಣಿಗೆಯಲ್ಲಿ. ಹನುಮಂತನ ಟ್ಯಾಬ್ಲೊ ಸಹಿತ ವಿವಿಧ ಟ್ಯಾಬ್ಲೊಗಳು, ಚೆಂಡೆ ಸಹಿತ ಆಕರ್ಷಕ ಪ್ರದರ್ಶನಗಳೊಂದಿಗೆ ಸ್ಥಳೀಯ ಗಣ್ಯರು ಹೆಜ್ಜೆ ಹಾಕಿದರು.
ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪಪ್ರಜ್ವಲನಗೈದು, ಕಾರ್ಯಕ್ರಮ ನಿರ್ವಿಘ್ನವಾಗಿ ನೆರವೇರಲಿ ಎಂದು ಹಾರೈಸಿದರು. ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ, ಬ್ರಹ್ಮಕಲಶ ಮಹೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ಸಂಚಾಲಕರಾದ ಪ್ರಕಾಶ್ ಕಾರಂತ ನರಿಕೊಂಬು, ಕೋಶಾಧಿಕಾರಿ ಕೆ.ಶಂಕರನಾರಾಯಣ ರಾವ್, ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ರಘು ಸಫಲ್ಯ, ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ಸದಸ್ಯರಾದ ಮೋಹನ ಆಚಾರ್ಯ, ಚಂದ್ರಾವತಿ ರತ್ನಾಕರ ನಾಯ್ಕ್, ಕೃಷ್ಣಪ್ಪ ಗಾಣಿಗ, ಸಂಜೀವ ಸಪಲ್ಯ, ಪ್ರಮುಖರಾದ ನಾರಾಯಣ ಸೋಮಯಾಜಿ, ಪುರುಷೋತ್ತಮ ಸಾಲಿಯಾನ್, ಸಂತೋಷ್ ಕುಮಾರ್, ಪ್ರೇಮನಾಥ ಶೆಟ್ಟಿ ಅಂತರ, ಶ್ರೀಷ ರಾಯಸ, ವಸಂತ ಪಿ, ಭುವನೇಶ್, ಪ್ರಕಾಶ್ ಕೋಡಿಮಜಲು, ಪ್ರವೀಣ್ ಕುಮಾರ್, ಪುರುಷೋತ್ತಮ ಬಂಗೇರ, ಕಿಶೋರ್ ಶೆಟ್ಟಿ, ಮೋಹನದಾಸ ಕೊಟ್ಟಾರಿ, ಕಮಲಾಕ್ಷ ಶಂಭೂರು ಸಹಿತ ಪ್ರಮುಖರು ಉಪಸ್ಥಿತರಿದ್ದರು.