ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ ಮಾತ್ರ ಉತ್ತಮವಾದ ಕಲಿಕೆಯನ್ನು ಹೊಂದಲು ಸಾಧ್ಯ ಎಂಬುದಾಗಿ ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷರಾದ ಸುಧೀರ್ ಸಾಗರ್ ಹೇಳಿದರು.
ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಗೆ ತಮ್ಮ ವತಿಯಿಂದ ಬಾಲವನವನ್ನು ನೀಡಿ ಉದ್ಘಾಟಿಸಿದ ಮಾತನಾಡಿದರು.
ಶಾಲಾ ದತ್ತು ಸಂಸ್ಥೆಯ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಅವರ ಸಹೋದರ ಶ್ರೀದೇವಿ ಕನ್ಸ್ಟ್ರಕ್ಷನ್ ಮಾಲಕರಾದ ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಕರ್ಕೆರ ಎಸ್ ಎಸ್ ಇಂಡಸ್ಟ್ರೀಸ್ ಬಂಟ್ವಾಳದ ಪ್ರೇಮನಾಥ ಕೆ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಭಾಗವಹಿಸಿದ್ದರು.ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಸ್ವಾಗತಿಸಿ. ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಮಜಿ ಸರಕಾರಿ ಪ್ರಾಥಮಿಕ ಶಾಲೆ ‘ಬಾಲವನ’ ಉದ್ಘಾಟನೆ"