ಬಂಟ್ವಾಳ

ಮಜಿ ಸರಕಾರಿ ಪ್ರಾಥಮಿಕ ಶಾಲೆ ‘ಬಾಲವನ’ ಉದ್ಘಾಟನೆ

ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು  ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ ಮಾತ್ರ ಉತ್ತಮವಾದ ಕಲಿಕೆಯನ್ನು ಹೊಂದಲು ಸಾಧ್ಯ ಎಂಬುದಾಗಿ   ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷರಾದ ಸುಧೀರ್ ಸಾಗರ್ ಹೇಳಿದರು.

ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಗೆ ತಮ್ಮ ವತಿಯಿಂದ ಬಾಲವನವನ್ನು ನೀಡಿ ಉದ್ಘಾಟಿಸಿದ ಮಾತನಾಡಿದರು.

ಶಾಲಾ ದತ್ತು ಸಂಸ್ಥೆಯ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಅವರ ಸಹೋದರ  ಶ್ರೀದೇವಿ ಕನ್ಸ್ಟ್ರಕ್ಷನ್  ಮಾಲಕರಾದ ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಕರ್ಕೆರ ಎಸ್ ಎಸ್ ಇಂಡಸ್ಟ್ರೀಸ್ ಬಂಟ್ವಾಳದ ಪ್ರೇಮನಾಥ ಕೆ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಭಾಗವಹಿಸಿದ್ದರು.ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಸ್ವಾಗತಿಸಿ. ಸಹ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts