ಭಯಂಕೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ

ಚಿತ್ರಗಳು: ಸತೀಶ್ ಕುಮಾರ್, ಕಾರ್ತಿಕ್ ಸ್ಟುಡಿಯೋ ಬಿ.ಸಿ.ರೋಡ್

ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ನರಿಕೊಂಬು ಪಾಣೆಮಂಗಳೂರಿನಲ್ಲಿರುವ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ 9.06ರಿಂದ 10.34ರ ತನಕದ ಶ್ರವಣ ನಕ್ಷತ್ರದಲ್ಲಿ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಸಂಪನ್ನಗೊಂಡಿತು.

ಬ್ರಹ್ಮಕಲಶೋತ್ಸವ ನಡೆಯುವ ಹೊತ್ತಿನಲ್ಲೇ ದೇವಸ್ಥಾನದ ಪ್ರಾಂಗಣದಲ್ಲಿ ನೃತ್ಯಭಜನೆ ಯೋಗೀಶ್ ಸಪಲ್ಯ ಬೋಳಂತೂರು ಮತ್ತು ದಾಮೋದರ ನೆತ್ತರಕೆರೆ ಮಾರ್ಗದರ್ಶನದಲ್ಲಿ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಡಾ. ಕಮಲಾ ಪ್ರಭಾಕರ ಭಟ್ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆನೀಡಿದರು. ದೇವರನ್ನು ಒಲಿಸುವ ಮುಖ್ಯ ಕಾರ್ಯವನ್ನು ಭಜನೆಯಿಂದ ಮಾಡಲು ಸಾಧ್ಯ ಎಂದು ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಈ ಸಂದರ್ಭ ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ಸಂಚಾಲಕ ಪ್ರಕಾಶ್ ಕಾರಂತ ನರಿಕೊಂಬು, ಉದ್ಯಮಿಗಳಾದ ಗಣೇಶ್ ರಾವ್, ಸಾಯಿಚಂದ್ ಜೈನ್, ಪುರೋಹಿತರಾದ ವೇ.ಮೂ.ವೆಂಕಪ್ಪಯ್ಯ ಭಟ್, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ನೃತ್ಯಭಜನೆ ಸಂಯೋಜಕರಾದ ಯೋಗೀಶ್ ಸಪಲ್ಯ ಬೋಳಂತೂರು ಉಪಸ್ಥಿತರಿದ್ದರು. ದಾಮೋದರ ನೆತ್ತರಕೆರೆ ಕಾರ್ಯಕ್ರಮ ನಿರ್ವಹಿಸಿದರು. ವ್ಯವಸ್ಥಾಪನಾ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಎರಕಳ, ಉಪಾಧ್ಯಕ್ಷ ಬಿ.ರಘು ಸಪಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ, ಸಂಚಾಲಕ ಪ್ರಕಾಶ್ ಕಾರಂತ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಾರ್ಯದರ್ಶಿ ಪದ್ಮನಾಭ ಮಯ್ಯ ಏಲಬೆ, ವ್ಯವಸ್ಥಾಪನಾ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಲೋಕೇಶ್ ಕೆ. ನರಹರಿನಗರ, ಕೋಶಾಧಿಕಾರಿ ಕೆ.ಶಂಕರನಾರಾಯಣ ರಾವ್, ವಿವಿಧ ಸಮಿತಿಗಳ ಪ್ರಮುಖರು, ಸಂಚಾಲಕರು, ಸಹಸಂಚಾಲಕರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದು, ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಯಂಕೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*