ಬಂಟ್ವಾಳ: ಬಂಟ್ವಾಳದ ರಿಕ್ಷಾ ಭವನದಲ್ಲಿ ರಿಕ್ಷಾ ಡ್ರೈವರ್ಸ್ ಅಸೋಸಿಯೇಷನ್ 48ನೇ ವಾರ್ಷಿಕ ಮಹಾಸಭೆ ಅಧ್ಯಕ್ಷ ರಾಜೇಶ್ ಬೊಳ್ಳುಕಲ್ಲು ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಅವರು, ಸಮಾಜದಲ್ಲಿ ರಿಕ್ಷಾ ಚಾಲಕರ ಕೊಡುಗೆ ಅಪಾರ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ನ್ಯಾಯವಾದಿ ಹೇಮಚಂದ್ರ ಮಾತನಾಡಿ, ಕಾನೂನು ಅರಿವು ಮೂಡಿಸಿದರು.
ಸಂಘದ ಉಪಾಧ್ಯಕ್ಷರಾದ ಹುಸೈನ್ ಬಿ ಮಾತನಾಡಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಪ್ರಕಾಶ್ ಹಾಗೂ ಖಜಾಂಜಿ ಕೃಷ್ಣಪ್ಪ ಉಪಸ್ಥಿತರಿದ್ದರು. ಸಂಘದಲ್ಲಿ ದುಡಿದ ಹಿರಿಯ ರಿಕ್ಷಾ ಚಾಲಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಸ್ವಾಗತಿಸಿದರು, ಉಸ್ಮಾನ ವಂದಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)