ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ಅಂತಿಮ ಬಿಸಿಎ ವಿದ್ಯಾರ್ಥಿನಿ ಯಶಸ್ವಿ ರಾಷ್ಟ್ರೀಯ ಚೆಸ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿಗಳಾದ ತಿಮ್ಮಪ್ಪ ಮೂಲ್ಯ ಮತ್ತು ಯಶೋಧಾ ದಂಪತಿಯ ಪುತ್ರಿಯಾಗಿರುವ ಅವರು, ಬಿಹಾರದ ಪಾಟ್ನಾದಲ್ಲಿ ನಡೆದ ರಾಷ್ಟ್ರೀಯ ಚೆಸ್ ಪಂದ್ಯಾವಳಿಯಲ್ಲಿ ಮಹಿಳೆಯರ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಈಕೆ ಕಲಿಕೆಯಲ್ಲೂ ಹಾಗೂ ನೃತ್ಯದಲ್ಲೂ ಮುಂದಿದ್ದು, ಸರಾಸರಿ ಶೇ.90 ಅಂಕಗಳನ್ನು ಗಳಿಸುವ ಮೂಲಕ ಸಾಧನೆ ಮೆರೆದಿದ್ದಾಗಿ ಕಾಲೇಜಿನ ಪ್ರಕಟಣೆ ತಿಳಿಸಿದೆ. ಈಕೆಯ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…