ಬಿಜೆಪಿಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಚುನಾವಣಾ ಪ್ರಚಾರ ಸಭೆ ಬಂಟ್ವಾಳ ಕ್ಷೇತ್ರದಲ್ಲಿ ಮಂಗಳವಾರ ಆರಂಭಗೊಂಡಿದೆ. ಸಿದ್ದಕಟ್ಟೆ ಸಂಗಬೆಟ್ಟು ವೀರಭದ್ರ,ಮಹಮ್ಮಾಯಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದ ಬಳಿಕ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು
ಕಾವಳಪಡೂರು ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ ಶಿವಾನಂದ ಪೂಜಾರಿ ಮಾವಿನಕಟ್ಟೆ ಮನೆಯಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಗೆಲುವಿನ ಅಂತರವನ್ನು ಜಾಸ್ತಿ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಅಭ್ಯರ್ಥಿ ಬ್ರಿಜೇಶ್ ಚೌಟ ಮಾತನಾಡಿ, ನಿಮ್ಮೆಲ್ಲರ ಪ್ರೀತಿ ವಿಶ್ವಾಸವನ್ನು ಉಳಿಸಿಕೊಂಡು ಗೌರವ ತರುವ ಕಾರ್ಯ ಮಾಡುತ್ತೇನೆಸಂಘಟನೆಯ ಆಧಾರದಲ್ಲಿ ಬೆಳೆದ ಪಕ್ಷವನ್ನು ಇನ್ನಷ್ಟು ಶಕ್ತಿಯುತವಾಗಿ ಬೆಳೆಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಪ್ರಮುಖರಾದ ದೇವಪ್ಪ ಪೂಜಾರಿ, ಸುಲೋಚನ ಜಿ.ಕೆ.ಭಟ್, ಪೂಜಾ ಪೈ, ಜಗದೀಶ್ ಶೇಣವ, ದಿನೇಶ್ ಅಮ್ಟೂರು, ಸಂದೇಶ್ ಶೆಟ್ಟಿ, ವಿಕಾಸ್ ಪುತ್ತೂರು, ದೇವದಾಸ್ ಶೆಟ್ಟಿ, ದೇವಪ್ಪ ಪೂಜಾರಿ, ಪ್ರಭಾಕರ್ ಪ್ರಭು, ರಾಮ್ ದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಶೇಖರ್ ಶೆಟ್ಟಿ, ಸಂತೋಷ್ ಕುಮಾರ್ ರಾಯಿಬೆಟ್ಟು, ರಾಜೀವಿ, ದಿನೇಶ್ ಅಮ್ಟೂರು, ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ರಮನಾಥ ರಾಯಿ ಮತ್ತಿತರರು ಉಪಸ್ಥಿತರಿದ್ದರು. ಪುರುಷೋತ್ತಮ ಶೆಟ್ಟಿ ವಾಮದಪದವು ಸ್ವಾಗತಿಸಿದರು.