ಪ್ರಮುಖ ಸುದ್ದಿಗಳು

LOKSABHA ELECTION 2024: ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

ಜಾಹೀರಾತು

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.

ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ತಾರೆ ಪ್ರತಿಭಾ ಕುಳಾಯಿ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts