ಬಿಜೆಪಿ ಕಾಲದಲ್ಲಿ ಆದ ಒಂದೇ ಒಂದು ಅಭಿವೃದ್ಧಿ ಕೆಲಸವನ್ನು ತೋರಿಸಿ ಎಂದು ಸವಾಲು ಹಾಕಿದ್ದೆ, ಇಂದಿಗೂ ಉತ್ತರ ದೊರಕಿಲ್ಲ ಎಂದು ಹೇಳಿರುವ ಕಾಂಗ್ರೆಸ ನ ಲೋಕಸಭಾ ಅಭ್ಯರ್ಥಿ ಆರ್. ಪದ್ಮರಾಜ್, ಕರಾವಳಿಯಲ್ಲಿ ಇದ್ದಂಥ ಸಾಮರಸ್ಯದ ಗತವೈಭವವನ್ನು ತರಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
ಬಂಟ್ವಾಳದ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಗುರುವಾರ ಸಂಜೆ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಚಾರಕ್ಕೆ ತೆರಳುವ ಸಂದರ್ಭ ಹೆಮ್ಮೆಯಿಂದ ಮನೆಮನೆಗೆ ತೆರಳುವಂತೆ ಮಾಡಿದ ಕೀರ್ತಿ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ನೀಡಿವೆ. ಹೀಗಾಗಿ ಪ್ರತಿ ಮನೆಯನ್ನು ಬೆಳಗಿಸಿದ ಯೋಜನೆ ನೀಡಿ ದೇಶಕ್ಕೆ ಮಾದರಿಯಾಗಿರುವ ಗ್ಯಾರಂಟಿಯನ್ನು ನೀಡಿದ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕಾರ್ಯ ಆಗಬೇಕಾಗಿದೆ ಎಂದರು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಕಾಂಗ್ರೆಸ್ ಪಕ್ಷ ಬಡವರ ಕಣ್ಣೀರೊರೆಸುವ ಕಾರ್ಯವನ್ನು ಮಾಡುತ್ತಿದ್ದು, ಈ ಬಾರಿ ದಕ್ಷಿಣ ಕನ್ನಡದಲ್ಲೂ ಪಕ್ಷದ ಪರವಾಗಿ ಜನರು ಇದ್ದಾರೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಇಡೀ ದೇಶಕ್ಕೆ ಕರ್ನಾಟಕ ಮಾದರಿಯಾಗಿದೆ. ಕಾಂಗ್ರೆಸ್ ಸರಕಾರ ಕೊಟ್ಟ ಭರವಸೆ ತಪ್ಪುವುದಿಲ್ಲ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಬಡ ಜನರಿಗೆ ಶಕ್ತಿ ದೊರಕಲಿದೆ ಎಂದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಮತಾ ಗಟ್ಟಿ ಮಾತನಾಡಿ, ಕಾಂಗ್ರೆಸ್ ಪಕ್ಷ ಹಿಂದೆ ನೀಡಿದ ಕೊಡುಗೆಗಳಿಂದಾಗಿ ಇಂದು ಪ್ರತಿ ಮನೆಗಳು ಬೆಳಗಿವೆ ಎಂದರು.
ಈ ಸಂದರ್ಭ ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಸ್ ಎಲ್.ರಾಡ್ರಿಗಸ್, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಅಶ್ವನಿ ಕುಮಾರ್ ರೈ, ಪದ್ಮಶೇಖರ ಜೈನ್, ಸುದರ್ಶನ್ ಜೈನ್, ಪದ್ಮನಾಭ ರೈ, ಅಬ್ಬಾಸ್ ಆಲಿ, ಜಯಂತಿ ವಿ.ಪೂಜಾರಿ, ಇಬ್ರಾಹಿಂ ನವಾಜ್, ನಾರಾಯಣ ನಾಯ್ಕ್, ಸುರೇಶ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…