ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಮಂಚಿ ಕುಕ್ಕಾಜೆಯ ಅಬುಸಾಲಿ (41) ಬಂಧಿತ ಆರೋಪಿ. ಬಂಟ್ವಾಳ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ ಮತ್ತು ಎಚ್ ಸಿ ರಾಜೇಶ್ ಎಸ್, ಗಣೇಶ್ ಎನ್ ಅವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.