ಬಂಟ್ವಾಳ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಕ್ಷೇತ್ರ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಹಾಗೂ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಉಪಸ್ಥಿತಿಯಲ್ಲಿ ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

ಜಾಹೀರಾತು

ಕಾರ್ಯಕಾರಿಣಿಯನ್ನು ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕಾದರೆ ಪ್ರತಿ ಬೂತಿನಲ್ಲಿ ಮನೆ ಸಂಪರ್ಕ ಮಾಡಿ ನರೇಂದ್ರ ಮೋದಿ ಆಡಳಿತದ ಸಾಧನೆ ತಿಳಿಸುವ ಮಹತ್ಕಾರ್ಯಗಳನ್ನು ಪಕ್ಷದ ಕಾರ್ಯಕರ್ತರು ಜನಪ್ರತಿನಿಧಿಗಳು ಮಾಡಬೇಕು. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 50000 ಮತಗಳ ಮುನ್ನಡೆ ಸಾಧಿಸಬೇಕೆಂದು ತಿಳಿಸಿದರು.

ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕ್ಷೇತ್ರ ಚುನಾವಣೆ ನಿರ್ವಹಣಾ ಸಮಿತಿ ಸಂಚಾಲಕ ದೇವಪ್ಪ ಪೂಜಾರಿ, ಕ್ಷೇತ್ರ ಚುನಾವಣಾ ಪ್ರಭಾರಿ ಜಗದೀಶ್ ಶೇಣವ, ಮಾಜಿ ಶಾಸಕರಾದ ನಾಗರಾಜ ಶೆಟ್ಟಿ, ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ದಿನೇಶ್ ಅಮ್ಟೂರು, ಕೃಷ್ಣಪ್ಪ ಪೂಜಾರಿ, ಲಕಿತ ಶೆಟ್ಟಿ, ರವಿಂದ್ರ ಕಂಬಳಿ, ಕಮಲಾಕ್ಷಿ ಕೆ ಪೂಜಾರಿ, ಮಾಧವ ಮಾವೆ, ಕ್ಷೇತ್ರ ಪದಾಧಿಕಾರಿಗಳು ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಶಕ್ತಿ ಕೇಂದ್ರದ  ಪ್ರಮುಖರು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಪುರಸಭೆಯ ಸದಸ್ಯರು ಜಿಲ್ಲಾ ಮಟ್ಟದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*