ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಕ್ಷೇತ್ರ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಹಾಗೂ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಉಪಸ್ಥಿತಿಯಲ್ಲಿ ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.
ಕಾರ್ಯಕಾರಿಣಿಯನ್ನು ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕಾದರೆ ಪ್ರತಿ ಬೂತಿನಲ್ಲಿ ಮನೆ ಸಂಪರ್ಕ ಮಾಡಿ ನರೇಂದ್ರ ಮೋದಿ ಆಡಳಿತದ ಸಾಧನೆ ತಿಳಿಸುವ ಮಹತ್ಕಾರ್ಯಗಳನ್ನು ಪಕ್ಷದ ಕಾರ್ಯಕರ್ತರು ಜನಪ್ರತಿನಿಧಿಗಳು ಮಾಡಬೇಕು. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 50000 ಮತಗಳ ಮುನ್ನಡೆ ಸಾಧಿಸಬೇಕೆಂದು ತಿಳಿಸಿದರು.
ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕ್ಷೇತ್ರ ಚುನಾವಣೆ ನಿರ್ವಹಣಾ ಸಮಿತಿ ಸಂಚಾಲಕ ದೇವಪ್ಪ ಪೂಜಾರಿ, ಕ್ಷೇತ್ರ ಚುನಾವಣಾ ಪ್ರಭಾರಿ ಜಗದೀಶ್ ಶೇಣವ, ಮಾಜಿ ಶಾಸಕರಾದ ನಾಗರಾಜ ಶೆಟ್ಟಿ, ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ದಿನೇಶ್ ಅಮ್ಟೂರು, ಕೃಷ್ಣಪ್ಪ ಪೂಜಾರಿ, ಲಕಿತ ಶೆಟ್ಟಿ, ರವಿಂದ್ರ ಕಂಬಳಿ, ಕಮಲಾಕ್ಷಿ ಕೆ ಪೂಜಾರಿ, ಮಾಧವ ಮಾವೆ, ಕ್ಷೇತ್ರ ಪದಾಧಿಕಾರಿಗಳು ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಶಕ್ತಿ ಕೇಂದ್ರದ ಪ್ರಮುಖರು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಪುರಸಭೆಯ ಸದಸ್ಯರು ಜಿಲ್ಲಾ ಮಟ್ಟದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.