ಬಂಟ್ವಾಳ

ಮಾರ್ಚ್ 31ರಂದು ಬಂಟ್ವಾಳ ಸ್ಪರ್ಶದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಬೃಹತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಭಾನುವಾರ, ಮಾ.31ರಂದು ಮಧ್ಯಾಹ್ನ 2.30ಕ್ಕೆ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕ್ಷೇತ್ರ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಚುನಾವಣೆ ಕೆಲಸದಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡುವ ದೃಷ್ಟಿಯಿಂದ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕರಾದ ರಾಜೇಶ್ ನಾಯ್ಕ್, ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಾಜಿ ಶಾಸಕರು ರಾಜ್ಯ ಜಿಲ್ಲಾ ಮಟ್ಟದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts