ಕಡಬ ತಾಲೂಕು ಕೊಯಿಲ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ, ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಆರೋಪದಲ್ಲಿ ಕಡಬ ಪೊಲೀಸ್ ಠಾಣಾ ಪಿ.ಎಸ್.ಐ ಅಭಿನಂಧನ್ ಎಂ.ಎಸ್ ಹಾಗೂ ಸಿಬ್ಬಂದಿಗಳು ಗುರುವಾರ ದಾಳಿ ಮಾಡಿದ್ದಾರೆ. ಸ್ಥಳದಲ್ಲಿದ್ದ ಜಾನುವಾರುಗಳ ಮಾಂಸ, ತ್ಯಾಜ್ಯ ಹಾಗೂ ಜಾನುವಾರು ವಧೆಗೆ ಬಳಸಿದ ಸೊತ್ತುಗಳನ್ನು ಪೊಲೀಸರು ಸ್ವಾದೀನಪಡಿಸಿಕೊಂಡಿದ್ದಾರೆ. ಓರ್ವ ಆರೋಪಿ ಇಲ್ಯಾಸ್ ನನ್ನು ಪೊಲೀಸರು ಬಂಧಿಸಿದ್ದು ಇನ್ನೋರ್ವ ಆರೋಪಿ ಮಹಮ್ಮದ್ ಆಮು ಎಂಬಾತ ಪರಾರಿಯಾಗಿದ್ದಾನೆ. ಈ ಬಗ್ಗೆ ಕಡಬ ಪೊಲೀಸರು ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…