ದಕ್ಷಿಣ ಕನ್ನಡ ಜಿಲ್ಲೆ ಎಂದೆಂದಿಗೂ ಹಿಂದುತ್ವದ ಭದ್ರಕೋಟೆ ಎಂದು ಲೋಕಸಭೆಯ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ಹೇಳಿದ್ದಾರೆ.
ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಹಿಂದೆಯೂ ದಕ್ಷಿಣ ಕನ್ನಡ ಹಿಂದುತ್ವದ ಭದ್ರಕೋಟೆಯಾಗಿತ್ತು, ಮುಂದೆಯೂ ಇರಲಿದೆ, ತಾನು ಹಿಂದುತ್ವಕ್ಕೆ ಬದ್ಧನಾಗಿದ್ದುಕೊಂಡೇ ಜಿಲ್ಲೆಯ ಅಭಿವೃದ್ಧಿಗೆ ಕಟಿಬದ್ಧನಾಗಿದ್ದೇನೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅವಧಿಯಲ್ಲಿನ ಯೋಜನೆ ಅನುಷ್ಠಾನದ ಜತೆಗೆ ಧಾರ್ಮಿಕ ಪ್ರವಾಸೋದ್ಯಮ ಸಹಿತ ಜಿಲ್ಲೆಯ ಅಭಿವೃದ್ಧಿಯನ್ನು ಶಾಸಕರ ಸಹಾಯದೊಂದಿಗೆ ಮಾಡುವೆ ಎಂದರು,.
ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಯುವ ಸಮುದಾಯ ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಪರವಾಗಿದ್ದು, ಗೆಲುವು ನಿಶ್ವಿತವಾಗಿದ್ದು, ಗೆಲುವಿನ ಅಂತರವನ್ನು ಹೆಚ್ಚು ಮಾಡಲು ಬಂಟ್ವಾಳದ ಕಾರ್ಯಕರ್ತರು ಶಕ್ತಿ ನೀಡುತ್ತಾರೆ ಎಂಬ ನಂಬಿಕೆಯಿದೆ ಎಂದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬಿಜೆಪಿ ಶಾಸಕರ ಕ್ಷೇತ್ರಕ್ಕಷ್ಟೇ ಅಲ್ಲ, ತನ್ನದೇ ಪಕ್ಷದ ಶಾಸಕರ ಕ್ಷೇತ್ರದಲ್ಲೂ ಅಭಿವೃದ್ಧಿ ಆಗಿಲ್ಲ ಎಂದರು.
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ , ಬಂಟ್ವಾಳ ಕ್ಷೇತ್ರ ಬಿಜೆಪಿಯ ಶಕ್ತಿಯಾಗಿದೆ, ಇಲ್ಲಿಂದಲೇ ಹೆಚ್ಚಿನ ಅಂತರದ ಗೆಲುವನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಾಣ ಮಾಡಲು ಸಹಕರಿಸಿ ಎಂದರು.
ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಚುನಾವಣಾ ಜಿಲ್ಲಾ ಸಂಚಾಲಕ ನಿತಿನ್ ಕುಮಾರ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಜಗದೀಶ್ ಶೇಣವ, ಕಿಯೋನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ಸುಲೋಚನ ಜಿ. ಕೆ ಭಟ್, ಪ್ರೇಮಾನಂದ, ಯತೀಶ್, ದೇವಪ್ಪ ಪೂಜಾರಿ ಉಪಸ್ಥಿತರಿದ್ದರು. ಬಿಜೆಪಿ ಬಂಟ್ಚಾಳ ಕ್ಷೇತ್ರ ಅಧ್ಯಕ್ಷ ಆರ್. ಚೆನ್ನಪ ಕೋಟ್ಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಹಿಂದುತ್ವದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿ: ಬಂಟ್ವಾಳದಲ್ಲಿ ಕ್ಯಾ.ಬೃಜೇಶ್ ಚೌಟ"