ಕಳೆದ ಆರು ದಿನಗಳ ಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿ ಮೃತದೇಹ ಭಾನುವಾರ ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಷ್ಮೀನಾರಾಯಣ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಮಾ.27ರಂದು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿದ್ದ ಇವರು ಮಾ.27 ರಂದು ಬುಧವಾರ ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದ್ದರು. ಪೋನ್ ಸ್ವಿಚ್ ಆಪ್ ಆಗಿತ್ತು. ಮನೆಗೂ ಹೋಗದೆ ಮನೆಯವರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದಾರೆ ಎಂದು ಈತನ ತಮ್ಮ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚುನಾವಣೆಗೆ ಸಂಬಂಧಿಸಿದ ಎಸ್.ಎಸ್.ಟಿ.ತಂಡದಲ್ಲಿ ಇವರು ಕರ್ತವ್ಯ ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ತಂಡದವರು ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಹಿಂದೆ ಕೂಡ ಇದೇ ರೀತಿ ಕಾಣೆಯಾಗಿದ್ದ ಲಕ್ಷ್ಮೀನಾರಾಯಣ ಅವರನ್ನು ಪೋಲೀಸರು ಪತ್ತೆ ಹಚ್ಚಿದ್ದರು. ಬೈಕ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿತ್ತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…