ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬವಾದ ಈಸ್ಟರ್ ಅನ್ನು ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ನಲ್ಲಿ ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಪ್ರಧಾನ ಗುರುಗಳಾಗಿ ಚರ್ಚ್ ಧರ್ಮಗುರು ವಂ|ಫಾ|ಫ್ರೆಡ್ರಿಕ್ ಮೊಂತೇರೊ,ಸಹಾಯಕ ಧರ್ಮಗುರುಗಳಾದ ವಂ|ಫಾ|ಸ್ಟ್ಯಾನಿ ಫೆರ್ನಾಂಡಿಸ್ ಬಲಿಪೂಜೆ ಅರ್ಪಿಸಿದರು.
ವಂ|ಫಾ|ಸ್ಟ್ಯಾನಿ ಫೆರ್ನಾಂಡಿಸ್ ಯೇಸು ಕ್ರಿಸ್ತರ ಪುನರುತ್ಥಾನದ ಮಹತ್ವದ ಬಗ್ಗೆ ಪ್ರವಚನ ನೀಡಿದರು.ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಲಿಪೂಜೆಯಲ್ಲಿ ಭಾಗವಹಿಸಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…