ರಾಯಿ: ‘ಮಕ್ಕಳ ಬೇಸಿಗೆ ಶಿಬಿರ’ಕ್ಕೆ ಚಾಲನೆ
ಗ್ರಾಮೀಣ ಪ್ರದೇಶಗಳ ಸರಕಾರಿ ಶಾಲಾ ವಿದ್ಯಾಥರ್ಿಗಳು ಹೆಚ್ಚಿನ ಪ್ರತಿಭೆ ಉಳ್ಳವರಾಗಿದ್ದು, ಇವರಿಗೆ ಬೇಸಿಗೆ ಶಿಬಿರಗಳ ಮೂಲಕ ಸೂಕ್ತ ಮಾರ್ಗದರ್ಶನ ದೊರೆತಾಗ ಅವರಿಂದ ಮತ್ತಷ್ಟು ಸಾಧನೆ ಹೊರ ಹೊಮ್ಮಲು ಪ್ರೇರಣೆಯಾಗುತ್ತದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಹೇಳಿದ್ದಾರೆ.
ಇಲ್ಲಿನ ರಾಯಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡ ಒಂದು ವಾರಗಳ ‘ಬೇಸಿಗೆ ಶಿಬಿರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಟ್ರಸ್ಟಿನ ಅಧ್ಯಕ್ಷ ಕೆ.ಮಧುಕರ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರು ಮತ್ತು ಮಕ್ಕಳ ಪೋಷಕರ ಸಹಭಾಗಿತ್ವದಲ್ಲಿ ಶಾಲೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು.
ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಟ್ರಸ್ಟಿ ಹರೀಶ ಆಚಾರ್ಯ ರಾಯಿ, ಸಂಪನ್ಮೂಲ ವ್ಯಕ್ತಿ ಕಾರ್ತಿಕ್ ವಗ್ಗ ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಅಧ್ಯಕ್ಷ ಕೆ.ಪರಮೇಶ್ವರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಜಾನೆಟ್ ಕಾನ್ಸೆಸೋ ಸ್ವಾಗತಿಸಿದರು. ಶಿಕ್ಷಕ ಸಿದ್ಧಪ್ಪ ವಂದಿಸಿದರು. ಶಿಕ್ಷಕಿ ಬೇಬಿ ಅರಳ ಕಾರ್ಯಕ್ರಮ ನಿರೂಪಿಸಿದರು.