ಸರಕಾರಿ ಶಾಲೆಗಳಿಗೆ ಶಿಕ್ಷಣಕ್ಕೆ ಪೂರಕ ಅವಶ್ಯಕತೆ ಅಗತ್ಯ: ಗಣೇಶ್ ಶೆಟ್ಟಿ ಗೋಳ್ತಮಜಲು
ಸರಕಾರಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಪೂರಕ ಅವಶ್ಯಕತೆ ಒದಗಿಸಿದರೆ ಶಿಕ್ಷಣವು ಗಟ್ಟಿಯಾಗುತ್ತದೆ ಎಂದು ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಅಧ್ಯಕ್ಷ ಗಣೇಶ್ ಶೆಟ್ಟಿ ಗೋಳ್ತಮಜಲು ಅಭಿಪ್ರಾಯಪಟ್ಟರು. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಪೂರ್ವ ಪ್ರಾಥಮಿಕ ತರಗತಿ ಮಕ್ಕಳ ಕಿಂಡರ್ ಗಾರ್ಟನ್ ಪದವಿ ಪ್ರದಾನ ಮಾಡಿ ಮಾತನಾಡಿದರು.
ಇಂದು ಸಮಾಜ ಶಿಕ್ಷಣಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸನ್ನದ್ದವಾಗಿದೆ, ಒಂದು ಶಾಲೆಯ ವ್ಯವಸ್ಥೆಗೆ ಪೂರಕವಾಗಿ ಆ ಶಾಲೆಯ ಶಿಕ್ಷಕರು, ಸಂಘ ಸಂಸ್ಥೆಗಳು, ಪೋಷಕರು ಒಟ್ಟಾಗಿ ಸೇರಿದಾಗ ಶಾಲಾ ವಿದ್ಯಾರ್ಥಿಗಳ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಮಜಿ ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಾತಾ ಡೆವಲಪರ್ಸ್ ಸುರತ್ಕಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಅಭಿಪ್ರಾಯಪಟ್ಟರು .
ಮುಖ್ಯ ಅತಿಥಿಯಾಗಿ ಮಜಿ ಶಾಲೆಗೆ ಸತತ 8 ವರ್ಷಗಳಿಂದ ಉಚಿತವಾಗಿ ತರಕಾರಿ ಪೂರೈಸುತ್ತಿರುವ ಚಂದ್ರಿಕಾ ವೆಜಿಟೇಬಲ್ಸ್ ಮೆಲ್ಕಾರ್ ಮಾಲಕರಾದ ಮೊಹಮ್ಮದ್ ಶರೀಫ್ ಶುಭ ಹಾರೈಸಿದರು. ಮಜಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಕಲಿಕಾ ಪ್ರಮಾಣ ನೀಡಲಾಯಿತು. ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಶಿಕ್ಷಕಿ ಹರಿಣಾಕ್ಷಿ ವಂದಿಸಿದರು, ಪೂರ್ವ ಪ್ರಾಥಮಿಕ ಶಿಕ್ಷಕಿರಾದ ಹೇಮಲತಾ ಹಾಗೂ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.