ಕಲ್ಲಡ್ಕ

ಸರಕಾರಿ ಶಾಲೆಗಳಿಗೆ ಶಿಕ್ಷಣಕ್ಕೆ ಪೂರಕ ಅವಶ್ಯಕತೆ ಅಗತ್ಯ: ಗಣೇಶ್ ಶೆಟ್ಟಿ ಗೋಳ್ತಮಜಲು

ಸರಕಾರಿ ಶಾಲೆಗಳಿಗೆ ಶಿಕ್ಷಣಕ್ಕೆ ಪೂರಕ ಅವಶ್ಯಕತೆ ಅಗತ್ಯ: ಗಣೇಶ್ ಶೆಟ್ಟಿ ಗೋಳ್ತಮಜಲು

ಹೆಚ್ಚಿನ ಮಾಹಿತಿಗೆ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸಬಹುದು.

ಜಾಹೀರಾತು

ಜಾಹೀರಾತು

ಸರಕಾರಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಪೂರಕ ಅವಶ್ಯಕತೆ ಒದಗಿಸಿದರೆ ಶಿಕ್ಷಣವು ಗಟ್ಟಿಯಾಗುತ್ತದೆ ಎಂದು ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಅಧ್ಯಕ್ಷ ಗಣೇಶ್ ಶೆಟ್ಟಿ ಗೋಳ್ತಮಜಲು ಅಭಿಪ್ರಾಯಪಟ್ಟರು. ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಪೂರ್ವ ಪ್ರಾಥಮಿಕ ತರಗತಿ ಮಕ್ಕಳ ಕಿಂಡರ್ ಗಾರ್ಟನ್  ಪದವಿ ಪ್ರದಾನ ಮಾಡಿ ಮಾತನಾಡಿದರು.                         

ಇಂದು ಸಮಾಜ ಶಿಕ್ಷಣಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸನ್ನದ್ದವಾಗಿದೆ, ಒಂದು ಶಾಲೆಯ ವ್ಯವಸ್ಥೆಗೆ ಪೂರಕವಾಗಿ ಆ ಶಾಲೆಯ ಶಿಕ್ಷಕರು, ಸಂಘ ಸಂಸ್ಥೆಗಳು, ಪೋಷಕರು ಒಟ್ಟಾಗಿ ಸೇರಿದಾಗ ಶಾಲಾ ವಿದ್ಯಾರ್ಥಿಗಳ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಮಜಿ ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಾತಾ ಡೆವಲಪರ್ಸ್ ಸುರತ್ಕಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಅಭಿಪ್ರಾಯಪಟ್ಟರು .

ಮುಖ್ಯ ಅತಿಥಿಯಾಗಿ ಮಜಿ ಶಾಲೆಗೆ ಸತತ 8 ವರ್ಷಗಳಿಂದ ಉಚಿತವಾಗಿ ತರಕಾರಿ ಪೂರೈಸುತ್ತಿರುವ ಚಂದ್ರಿಕಾ ವೆಜಿಟೇಬಲ್ಸ್ ಮೆಲ್ಕಾರ್ ಮಾಲಕರಾದ ಮೊಹಮ್ಮದ್ ಶರೀಫ್ ಶುಭ ಹಾರೈಸಿದರು. ಮಜಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ  ಕೊರಗಪ್ಪ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಕಲಿಕಾ ಪ್ರಮಾಣ ನೀಡಲಾಯಿತು. ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ, ಶಿಕ್ಷಕಿ ಹರಿಣಾಕ್ಷಿ ವಂದಿಸಿದರು, ಪೂರ್ವ ಪ್ರಾಥಮಿಕ ಶಿಕ್ಷಕಿರಾದ ಹೇಮಲತಾ ಹಾಗೂ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts