ಬಂಟ್ವಾಳ

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಚೇರಿ ಬಂಟ್ವಾಳದಲ್ಲಿ ಆರಂಭ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಪ್ರಚಾರ ಕಚೇರಿ ಬಿ ಸಿ ರೋಡಿನ ಬಾವಾ ಬಿಲ್ಡರ್ಸ್ ಸ್ಮಾರ್ಟ್ ಸಿಟಿ ಸಂಕೀರ್ಣದ 2ನೇ ಮಹಡಿಯಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ಜಾಹೀರಾತು

ಕಚೇರಿ ಉದ್ಘಾಟಿಸಿದ ದ ಕ ಲೋಕಸಭಾ ಕ್ಷೇತ್ರದ ಪ್ರಚಾರ ಉಸ್ತುವಾರಿ, ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಮಾತನಾಡಿ, ಬುಧವಾರ ನಮ್ಮ ಅಭ್ಯರ್ಥಿ ಪದ್ಮರಾಜ್ ಅವರು ನಾಮಪತ್ರ ಸಲ್ಲಿಸಿದ್ದು, ಇಂದು ಬಿ ಸಿ ರೋಡಿನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಚಾರ ಕಚೇರಿ ಉದ್ಘಾಟನೆಗೊಂಡಿದೆ. ಇದೇ ಕ್ಷಣದಿಂದ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯ ಬಿರುಸು ಪಡೆದುಕೊಳ್ಳಲಿದೆ. ಇನ್ನು ಕೆಲವು ದಿನ ಪಕ್ಷದಲ್ಲಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ನಾಯಕರು ಪಕ್ಷದ ಕಾರ್ಯಕರ್ತರನ್ನು ಸೇರಿಸಿಕೊಂಡು ಬಿಡುವಿಲ್ಲದೆ ಅಭ್ಯರ್ಥಿಯ ಪರವಾಗಿ ಪ್ರಚಾರ ಕೈಗೊಂಡು ಗೆಲುವಿಗಾಗಿ ಶ್ರಮಿಸುವಂತೆ ಕರೆ ನೀಡಿದರು.  ಈ ಸಂದರ್ಭ ಬಂಟ್ವಾಳ ಕ್ಷೇತ್ರದ ಚುನಾವಣಾ ಸಂಯೋಜಕ ಹಾಗೂ ವೀಕ್ಷಕ ಪಿಯೂಸ್ ಎಲ್ ರೋಡ್ರಿಗಸ್, ಬಂಟ್ವಾಳ ಕ್ಷೇತ್ರದ ಪ್ರಚಾರ ಉಸ್ತುವಾರಿ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪಕ್ಷ ಪ್ರಮುಖರಾದ ಎಂ ಅಶ್ವನಿ ಕುಮಾರ್ ರೈ,  ಬಿ ಎಂ ಅಬ್ಬಾಸ್ ಅಲಿ, ಜನಾರ್ದನ ಚಂಡ್ತಿಮಾರ್, ಮುಹಮ್ಮದ್ ನಂದರಬೆಟ್ಟು, ಲುಕ್ಮಾನ್ ಬಿ ಸಿ ರೋಡು, ಜಯಂತಿ ಪೂಜಾರಿ, ಅನ್ವರ್ ಕರೋಪಾಡಿ, ಪದ್ಮನಾಭ ರೈ, ಸುದರ್ಶನ್ ಜೈನ್, ಅಲ್ತಾಫ್ ಸಂಗಬೆಟ್ಟು, ಸ್ಟೀವನ್ ಡಿಸೋಜ, ಮಧುಸೂಧನ್ ಶೆಣೈ, ಬಿ ಮೋಹನ್, ರಾಜೇಶ್ ರೋಡ್ರಿಗಸ್, ಪ್ರವೀಣ್ ರೋಡ್ರಿಗಸ್ ಮೊದಲಾದವರು ಭಾಗವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.