ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿ ಶುಕ್ರವಾರ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.
ಪುದುವೆಟ್ಟು ಗ್ರಾಮದ ಮಠ ನಿವಾಸಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಓದುತ್ತಿರುವ ಶರೋನ್ ಹಾಗೂ ಕಳೆಂಜ ಗ್ರಾಮದ ಮಾಣಿಂಗೇರಿ ನಿವಾಸಿ, ನರ್ಸಿಂಗ್ ವಿದ್ಯಾರ್ಥಿ ಸೆಬಾಸ್ಟಿಯನ್ ಗಾಯಾಳುಗಳು.
ಶುಕ್ರವಾರ ಮುಂಜಾನೆ ಬಿ-ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಬಿ.ಸಿ.ರೋಡ್‌ನಿಂದ ಮಂಗಳೂರು ಕಡೆ ಬೈಕಿನಲ್ಲಿ ಹೋಗುತ್ತಿರುವಾಗ ಘಟನೆ ಸಂಭವಿಸಿದೆ. ಮಸೀದಿಗೆ ಹೋಗುತ್ತಿದ್ದ ಸ್ಥಳೀಯರು ಗಮನಿಸಿ ಆಸ್ಪತ್ರೆಗೆ ಸಾಗಿಸಿದ್ದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ, ಮಂಗಳೂರು ಯುನಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.