ಡಸ್ಟರ್ ಕಾರೊಂದು ಹೊತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ. ಏಳಿಂಜೆಯ ನಿವಾಸಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದು ಪಾರಾಗಿದ್ದಾರೆ. ಕಾರಿನ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರನ್ನು ನಿಲ್ಲಿಸಲಾಗಿತ್ತು. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಘಟನೆ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ ಮೂಡುಬಿದಿರೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.