ಸಮುದಾಯದ ಹಿತವನ್ನು ಕಾಯುವ ಕಾರ್ಯವನ್ನು ಜಾನಪದ ಸಾಹಿತ್ಯ ಮಾಡಿಕೊಂಡು ಬಂದಿದ್ದು, ಅದನ್ನು ಉಳಿಸಿ, ಬೆಳೆಸುವ ಕಾರ್ಯ ನಡೆಯಬೇಕಾಗಿದೆ ಎಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆನುವಂಶಿಕ ಪ್ರಧಾನ ಅರ್ಚಕ ಪಿ.ರಾಮ ಭಟ್ ಹೇಳಿದ್ದಾರೆ.
ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭ ಉದ್ಯಮಿ ರಘುನಾಥ ಸೋಮಯಾಜಿ ಅವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.
ತಾಲೂಕು ಘಟಕದ ಅಧ್ಯಕ್ಷೆ ಪ್ರಮೀಳಾ ಮಾಣೂರು ಅಧ್ಯಕ್ಷತೆ ವಹಿಸಿ, ಕಾರ್ಯಯೋಜನೆ ಕುರಿತು ವಿವರಿಸಿದರು. ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ರಂಗೋಲಿ, ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ, ಯಕ್ಷಗಾನ ಹಿರಿಯ ಕಲಾವಿದ ಶಿವರಾಮ ಜೋಗಿ, ಸಾಹಿತಿ ಮಾಲತಿ ಶೆಟ್ಟಿ ಮಾಣೂರು, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಮೋಹನದಾಸ ಕೊಟ್ಟಾರಿ ಮುನ್ನೂರು, ಪರಿಷತ್ತಿನ ಕೋಶಾಧಿಕಾರಿ ಬಬಿತಾ ಎಸ್.ಎಂ, ಜತೆಕಾರ್ಯದರ್ಶಿ ಲಕ್ಷ್ಮೀ ಯಶವಂತ ಶೆಟ್ಟಿ, ಉಪಾಧ್ಯಕ್ಷರಾದ ಪ್ರತಿಭಾ ಪಿ.ಶೆಟ್ಟಿ, ಕೃಷ್ಣ ಕುಲಾಲ್ ನರಿಕೊಂಬು, ಗೌರವ ಸಲಹೆಗಾರರಾದ ಸುಧಾಕರ ತುಂಬೆ, ಅನಿಲ್ ಪಂಡಿತ್, ಗೋಪಾಲ ಅಂಚನ್ ಆಲದಪದವು, ಸಂಚಾಲಕರಾದ ಮನೋಜ್ ಕನಪಾಡಿ, ಪ್ರಶಾಂತ್ ಕನಪಾಡಿ, ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಹಾಸ ಕಡೆಗೋಳಿ, ರಾಜೇಶ್ ಆಚಾರ್ಯ, ದಿನೇಶ್ ಅಮೀನ್, ಸಾಂಸ್ಕೃತಿಕ ಕಾರ್ಯದರ್ಶಿ ದಿನೇಶ್ ಶೆಟ್ಟ ಕೊಟ್ಟಿಂಜ ಉಪಸ್ಥಿತರಿದ್ದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರ ಪಂಬದ ಅವರನ್ನು ಸನ್ಮಾನಿಸಲಾಯಿತು. ಪ್ರಧಾನ ಕಾರ್ಯದರ್ಶಿ ರಮೇಶ್ ಮೇಲ್ಕಾರ್ ಪ್ರಾಸ್ತಾವಿಕ ಮಾತನಾಡಿದರು. ಗೌರವ ಸಲಹೆಗಾರ ಸದಾಶಿವ ಡಿ. ತುಂಬೆ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಎಚ್.ಕೆ.ನಯನಾಡು ಕಾರ್ಯಕ್ರಮ ನಿರ್ವಹಿಸಿದರು.