ಲೋಕಾಯುಕ್ತ ಹೆಸರಲ್ಲಿ ಅನಧಿಕೃತ ವ್ಯಕ್ತಿಗಳು ಅಧಿಕಾರಿಗಳಿಗೆ ಕರೆ ಮಾಡುವ ಕುರಿತು ಮಾಹಿತಿಗಳು ಬಂದಿದ್ದು, ಅಂಥದ್ದೇನಾದರೂ ಇದ್ದರೆ, ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ.ಕುಮಾರ್ ತಿಳಿಸಿದ್ದಾರೆ.
ಸೋಮವಾರ ಬಂಟ್ವಾಳ ತಾ.ಪಂ.ಎಸ್ಜಿಎಸ್ವೈ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಿದ ಸಂದರ್ಭ ಮಾತನಾಡಿದ ಅವರು, ಸರಕಾರಿ ಅಧಿಕಾರಿಗಳಿಗೆ ಲೋಕಾಯುಕ್ತರು ಎಂದು ಹೇಳಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವುದು ಗಮನಕ್ಕೆ ಬಂದಿರುವುದನ್ನು ಪ್ರಸ್ತಾಪಿಸಿದರು. ಈ ಸಂದರ್ಭ ಸಾರ್ವಜನಿಕರು ಅಹವಾಲು ಮಂಡಿಸಿದರು.
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್, ತಾಪಂ ಇಒ ರಾಹುಲ್ ಕಾಂಬ್ಳೆ, ಲೋಕಾಯುಕ್ತ ಇನ್ಸ್ ಪೆಕ್ಟರ್ ಗಳಾದ ಅಮಾನುಲ್ಲ ಎ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್, ಸಿಬ್ಬಂದಿಗಳಾದ ಮಹೇಶ್, ಬಾಲರಾಜ್, ಗಂಗಣ್ಣ, ರುದ್ರೇಗೌಡ, ಪಂಪಣ್ಣ, ಉಪಸ್ಥಿತರಿದ್ದರು.
Be the first to comment on "ಬಂಟ್ವಾಳದಲ್ಲಿ ಲೋಕಾಯುಕ್ತ ತಂಡದಿಂದ ಅಹವಾಲು ಸ್ವೀಕಾರ"