ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ, ಲೆನಿನ್ ವಾದಿ) ಲಿಬರೇಶನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ರಾಜಕೀಯ ಸಮಾವೇಶ ಬಂಟ್ವಾಳದಲ್ಲಿ ನಡೆಯಿತು.
ಸಮಾವೇಶವನ್ನು ಉದ್ಘಾಟಿಸಿ ಸಿ.ಪಿ.ಐ.ಎಂ.ಎಲ್ ಲಿಬರೇಶನ್ ರಾಜ್ಯ ಕಾರ್ಯದರ್ಶಿ ಕ್ಲಿಪ್ಟನ್ ಡಿ ರೊಜಾರಿಯೋ ಮಾತನಾಡಿ ಈ ಬಾರಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ದೇಶದ ಜನತೆ ಒಗ್ಗಟ್ಟಾಗಬೇಕೆಂದು ಕರೆ ನೀಡಿದರು.
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಇಂಡಿಯಾ ಒಕ್ಕೂಟದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಅವರಿಗೆ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಪಕ್ಷದ ಪಾಲಿಟ್ ಬ್ಯೂರೋ ಸದಸ್ಯರಾದ ಶಂಕರ್, ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿದರು. ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಕೆ.ಇ.ಮೋಹನ್ ಅದ್ಯಕ್ಷತೆ ವಹಿಸಿದ್ದರು. ಪಕ್ಷದ ಮುಖಂಡರಾದ ತುಳಸೀದಾಸ್ ವಿಟ್ಲ ಸ್ವಾಗತಿಸಿದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)