ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಾರೀಶಕ್ತಿ ಎಂಬ ಬಿಜೆಪಿ ಮಹಿಳಾ ಸಮಾವೇಶ ಮಂಗಳವಾರ ನಡೆಯತು. ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಈ ಸಂದರ್ಭ ಮಾತನಾಡಿ, ಬಿಜೆಪಿಯಿಂದ ಮಹಿಳೆಯರ ಅಭಿವೃದ್ಧಿಪರ ಕಾರ್ಯಯೋಜನೆಗಳನ್ನು ತರಲಾಯಿತು ಎಂದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಹಾಕಿರುವ ಅಡಿಪಾಯದ ಮೇಲೆ ಸೌಧವನ್ನು ಕಟ್ಟುವ ಚುನಾವಣೆ ಇದಾಗಿದೆ ಎಂದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಪಕ್ಷವನ್ನು ಬಲಪಡಿಸುವುದರ ಜೊತೆಗೆ ಪ್ರಧಾನಿ ಮೋದಿಯವರ ಅಧಿಕಾರದ ಅವಧಿಯಲ್ಲಿ ಜಾರಿಯಾದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ನಮ್ಮಿಂದ ಆಗಬೇಕಾಗಿದೆ ಎಂದು ತಿಳಿಸಿದರು.
ಮಹಿಳಾ ಮೋರ್ಚಾ ಬಂಟ್ವಾಳ ಮಂಡಲದ ಅಧ್ಯಕ್ಷೆ ಭಾರತಿ ಚೌಟ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್, ಬಂಟ್ವಾಳ ಚುನಾವಣಾ ಪ್ರಭಾರಿ ಜಗದೀಶ್ ಶೇಣವ, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಜಿಲ್ಲೆಯ ಮಾಜಿ ಕಾರ್ಯದರ್ಶಿ ಕಸ್ತೂರಿ ಪಂಜ, ಜಿ.ಪಂ.ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಪುತ್ತೂರು ಪ್ರಭಾರಿ ಸುಲೋಚನ ಜಿ.ಕೆ ಭಟ್, ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಧನಲಕ್ಮೀ ಗಟ್ಟಿ, ಗುಣವತಿ ಕೊಲ್ಲತ್ತಡ್ಕ,ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಖಿತಾ ಆರ್ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ ಸ್ವಾಗತಿಸಿದರು. ಹಿರಣ್ಮಯಿ ಧನ್ಯವಾದ ನೀಡಿದರು. ಮಣಿಮಾಲ ಬಿ.ಶೆಟ್ಟಿ ಹಾಗೂ ಸೀಮಾ ಮಾದವ ಕಾರ್ಯಕ್ರಮ ನಿರೂಪಿಸಿದರು