ರಾಜಕೀಯ ಲಾಭಕ್ಕಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಫೊಟೋವನ್ನು ಬಳಕೆ ಮಾಡುತ್ತಿರುವುದು ಸರಿಯಲ್ಲ ಎಂದು ಬಂಟ್ವಾಳದಲ್ಲಿ ಬಿಲ್ಲವ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಜಗದೀಶ ಕೊಯ್ಲ, ಬ್ರಹ್ಮಶ್ರೀ ನಾರಾಯಣಗುರುಗಳ ಟ್ಯಾಬ್ಲೊವನ್ನು ಪ್ರದರ್ಶನ ಮಾಡದಂತೆ ಮಾಡಿದವರು, ಇದೀಗ ರಾಜಕೀಯ ಲಾಭಕ್ಕಾಗಿ ಫೊಟೋವನ್ನು ಬಳಕೆ ಮಾಡುತ್ತಿದ್ದಾರೆ ಎಂದರು.
ಬಿಲ್ಲವ ಸಮಾಜಕ್ಕೆ ಅವಮಾನ, ನಾರಾಯಣ ಗುರುಗಳ ವಿಚಾರಗಳಿಗೆ ಅವಮಾನ ಮಾಡುವ ವ್ಯಕ್ತಿಗಳಿಗೆ ಲೋಕಸಭಾ ಚುನಾವಣೆಯ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರುಗಳ ನೆನಪಾಗಿದೆ ಎಂದು ವ್ಯಂಗವಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಂಜೀವ ಪೂಜಾರಿ ಬಿರ್ವ, ಹರೀಶ್ ಪೂಜಾರಿ, ಬಿ. ವಾಸು ಪೂಜಾರಿ, ಪ್ರೇಮನಾಥ್, ಮಾಯಿಲಪ್ಪ ಸಾಲಿಯಾನ್, ತಿಲಕ್ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರಾಜಕೀಯ ಲಾಭಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಫೊಟೋ ಬಳಕೆ: ಬಿಲ್ಲವ ಮುಖಂಡರ ಆಕ್ಷೇಪ"
Be the first to comment on "ರಾಜಕೀಯ ಲಾಭಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಫೊಟೋ ಬಳಕೆ: ಬಿಲ್ಲವ ಮುಖಂಡರ ಆಕ್ಷೇಪ"