ಮೊಡಂಕಾಪಿನಲ್ಲಿರುವ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್ ಕಾರ್ಯ ನಡೆಯಿತು.
ಈ ಸಂದರ್ಭ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಮಿಷನಿಂಗ್ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದರು. ಪೂರ್ವಾಹ್ನ 6 ಗಂಟೆಯಿಂದಲೇ ಕರ್ತವ್ಯ ನಿರತರಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ವತಃ ಮಧ್ಯಾಹ್ನದ ಊಟ ಬಡಿಸಿ, ಪ್ರಶಂಸೆ ವ್ಯಕ್ತಪಡಿಸಿದರು. 205 ಬಂಟ್ವಾಳದ ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ, ಚುನಾವಣಾ ನೋಡಲ್ ಅಧಿಕಾರಿ ರಾಜು ಮೋಗವೀರ, ತಹಸೀಲ್ದಾರ್ ಅರ್ಚನಾ ಭಟ್, ಸೆಕ್ಟರ್ ಅಧಿಕಾರಿಗಳು, ಚುನಾವಣಾ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಸೀಲ್ದಾರ್ ದಿವಾಕರ ಮುಗಳಿಯ, ವಿಷಯ ನಿರ್ವಾಹಕ ಮಂಜುನಾಥ ಕೆ ಎಚ್, ಕಂದಾಯ ನಿರೀಕ್ಷಕರು, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮಸಹಾಯಕರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Be the first to comment on "ಮೊಡಂಕಾಪು: ಮತಯಂತ್ರಗಳ ಕಮೀಷನಿಂಗ್ ಕಾರ್ಯ, ಜಿಲ್ಲಾಧಿಕಾರಿ ಭೇಟಿ"