ಬಂಟ್ವಾಳ

ಮೊಡಂಕಾಪು: ಮತಯಂತ್ರಗಳ ಕಮೀಷನಿಂಗ್ ಕಾರ್ಯ, ಜಿಲ್ಲಾಧಿಕಾರಿ ಭೇಟಿ

ಜಾಹೀರಾತು

ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯ ನಡೆಯಿತು.

ಈ ಸಂದರ್ಭ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಕಮಿಷನಿಂಗ್‌ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದರು.  ಪೂರ್ವಾಹ್ನ 6 ಗಂಟೆಯಿಂದಲೇ ಕರ್ತವ್ಯ ನಿರತರಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ವತಃ  ಮಧ್ಯಾಹ್ನದ ಊಟ ಬಡಿಸಿ, ಪ್ರಶಂಸೆ ವ್ಯಕ್ತಪಡಿಸಿದರು. 205 ಬಂಟ್ವಾಳದ ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ, ಚುನಾವಣಾ ನೋಡಲ್ ಅಧಿಕಾರಿ ರಾಜು ಮೋಗವೀರ, ತಹಸೀಲ್ದಾರ್‌ ಅರ್ಚನಾ ಭಟ್‌, ಸೆಕ್ಟರ್ ಅಧಿಕಾರಿಗಳು, ಚುನಾವಣಾ ಉಪತಹಸೀಲ್ದಾರ್‌ ನವೀನ್‌ ಕುಮಾರ್‌ ಬೆಂಜನಪದವು, ಉಪತಹಸೀಲ್ದಾರ್ ದಿವಾಕರ ಮುಗಳಿಯ, ವಿಷಯ ನಿರ್ವಾಹಕ ಮಂಜುನಾಥ ಕೆ ಎಚ್,  ಕಂದಾಯ ನಿರೀಕ್ಷಕರು, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮಸಹಾಯಕರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts