ಪ್ರಮುಖ ಸುದ್ದಿಗಳು

ಮಂಗಳೂರಲ್ಲಿ ಪ್ರಧಾನಿ ಮೋದಿ ಹವಾ ಹೇಗಿತ್ತು? ಚಿತ್ರಗಳು ಇಲ್ಲಿವೆ

ಜಾಹೀರಾತು

ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಹಾಗೂ ಉಡುಪಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕಡಲನಗರಿ ಮಂಗಳೂರಲ್ಲಿ ಭಾನುವಾರ ರೋಡ್ ಶೋ ನಡೆಸಿದರು.
ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಬ್ರಹ್ಮಶ್ರೀ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದರು
. ತೆರೆದ ವಾಹನದಲ್ಲಿ ಮೋದಿ ಅವರು ಅಭ್ಯರ್ಥಿ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಜೊತೆ ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸಿದರು
. ರಸ್ತೆಯ ಇಕ್ಕೆಲೆಗಳಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು, ಸಾರ್ವಜನಿಕರು ಸೇರಿದ್ದರು.
ಜನರು ಹರ್ಷೋದ್ಘಾರ ನಡುವೆ ಹೂವಿನ ಪಕಳವನ್ನು ಪ್ರಧಾನಿಯತ್ತ ಚೆಲ್ಲಿ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಿ ಜನಸಮೂಹದತ್ತ ಕೈಬೀಸುತ್ತಲೇ ಸಾಗಿದರು. ನವಭಾರತ ಸರ್ಕಲ್ ಬಳಿ ರೋಡ್ ಶೋ ಸಮಾಪ್ತಿಗೊಂಡಿತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts