ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಆರಂಭಗೊಂಡಿದೆ.
ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ 25 ಮತಗಟ್ಟೆ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಈಗಾಗಲೇ ಮತದಾರರ ಪಟ್ಟಿಯಲ್ಲಿ ದಾಖಲಿರುವ ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸಲಿದ್ದಾರೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತಲಿದ್ದಾರೆ. ಸಂಪೂರ್ಣ ಮತದಾನದ ವಿಡಿಯೋಗ್ರಾಫಿ ಮಾಡಲಾಗುತ್ತದೆ. ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇದರ ಮಸ್ಟರಿಂಗ್ ಕಾರ್ಯ ನಡೆಯಿತು. ಈ ಸಂದರ್ಭ ಬಂಟ್ವಾಳದ ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ, ತಹಸೀಲ್ದಾರ್ ಅರ್ಚನಾ ಭಟ್, ಉಪತಹಸೀಲ್ದಾರ್ ನವೀನ್ ಬೆಂಜನಪದವು, ಮಾಸ್ಟರ್ ಟ್ರೈನರ್ ಅಬ್ದುಲ್ ರಝಾಕ್, ವಿಷಯ ನಿರ್ವಾಹಕ ಮಂಜುನಾಥ್ ಕೆ ಎಚ್ , ಬಿ ಮೂಡ ಗ್ರಾಮ ಆಡಳಿತ ಅಧಿಕಾರಿ ಕರಿಬಸಪ್ಪ ನಾಯಕ್, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಪ್ರತೀ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಬಿ.ಎಲ್.ಒ. ರವರೂ ಸೇರಿದಂತೆ ಏಳು ಜನ ಇರಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ 90 ಮತಗಟ್ಟೆ ಅಧಿಕಾರಿಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಪ್ರಕ್ರಿಯೆ ಏ.17ರವರೆಗೆ ನಡೆಯಲಿದೆ
Be the first to comment on "ಲೋಕಸಭಾ ಚುನಾವಣೆ: 85ಕ್ಕೆ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ ಪ್ರಕ್ರಿಯೆ ಆರಂಭ"