ಲೋಕಸಭಾ ಚುನಾವಣೆ: 85ಕ್ಕೆ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ ಪ್ರಕ್ರಿಯೆ ಆರಂಭ

ಜಾಹೀರಾತು

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಆರಂಭಗೊಂಡಿದೆ.

ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ 25 ಮತಗಟ್ಟೆ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಈಗಾಗಲೇ ಮತದಾರರ ಪಟ್ಟಿಯಲ್ಲಿ ದಾಖಲಿರುವ ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸಲಿದ್ದಾರೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತಲಿದ್ದಾರೆ. ಸಂಪೂರ್ಣ ಮತದಾನದ ವಿಡಿಯೋಗ್ರಾಫಿ ಮಾಡಲಾಗುತ್ತದೆ. ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇದರ ಮಸ್ಟರಿಂಗ್ ಕಾರ್ಯ ನಡೆಯಿತು. ಈ ಸಂದರ್ಭ ಬಂಟ್ವಾಳದ ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ, ತಹಸೀಲ್ದಾರ್ ಅರ್ಚನಾ ಭಟ್, ಉಪತಹಸೀಲ್ದಾರ್ ನವೀನ್ ಬೆಂಜನಪದವು, ಮಾಸ್ಟರ್ ಟ್ರೈನರ್ ಅಬ್ದುಲ್ ರಝಾಕ್,  ವಿಷಯ ನಿರ್ವಾಹಕ ಮಂಜುನಾಥ್ ಕೆ ಎಚ್ , ಬಿ ಮೂಡ ಗ್ರಾಮ ಆಡಳಿತ ಅಧಿಕಾರಿ ಕರಿಬಸಪ್ಪ ನಾಯಕ್, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಪ್ರತೀ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಬಿ.ಎಲ್.ಒ. ರವರೂ ಸೇರಿದಂತೆ ಏಳು ಜನ ಇರಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ 90 ಮತಗಟ್ಟೆ ಅಧಿಕಾರಿಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಪ್ರಕ್ರಿಯೆ ಏ.17ರವರೆಗೆ ನಡೆಯಲಿದೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಲೋಕಸಭಾ ಚುನಾವಣೆ: 85ಕ್ಕೆ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ ಪ್ರಕ್ರಿಯೆ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*