ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಹಿಂದು ಯುವಸೇನೆ ಕಾರ್ಯಕರ್ತ ಪುಷ್ಪರಾಜ್ ಎಂಬವರಿಗೆ ಚೂರಿಯಲ್ಲಿ ಇರಿದ ಕುರಿತು ಪ್ರಕರಣ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದರು. ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿ ರವಿ ನಾವೂರು ಹಾಗೂ ಪುಷ್ಪರಾಜ್ ಎಂಬವರ ನಡುವೆ ಗಲಾಟೆ ನಡೆದು, ಆರೋಪಿ ರವಿ ನಾವೂರು ಪುಷ್ಪರಾಜ್ ರವರಿಗೆ ಚೂರಿಯಿಂದ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಹಲ್ಲೆಯಿಂದ ಗಾಯಗೊಂಡ ಪುಷ್ಪರಾಜ್ ಅವರನ್ನು, ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ, ಮಂಗಳೂರು ಖಾಸಗಿ ದಾಖಲಿಸಲಾಯಿತು. ಹಣಕಾಸಿನ ವಿಚಾರದಲ್ಲಿ ಆರೋಪಿ ಹಲ್ಲೆ ನಡೆಸಿರುವುದಾಗಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಚೂರಿ ಇರಿತದಿಂದ ಗಾಯಗೊಳಗಾದ ಬಂಟ್ವಾಳದ ಪುಷ್ಪರಾಜ್ ಅವರ ಯೋಗಕ್ಷೇಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಚಾರಿಸಿದರು. ಈ ಸಂದರ್ಭ ಪಕ್ಷದ ಮುಖಂಡರು ಹಾಜರಿದ್ದರು.
ಚೂರಿ ಇರಿತ ಪ್ರಕರಣ: ಆರೋಪಿ ಬಂಧನಕ್ಕೆ ಒತ್ತಾಯ
ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಪುಷ್ಪರಾಜ್ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾಗಿರುವುದನ್ನು ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಬಂಟ್ವಾಳ ತಾಲೂಕು ಘಟಕ ಖಂಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ವಸಂತ ಕುಮಾರ್ ಮಣಿಹಳ್ಳ, ಅಮಾಯಕ ಪುಷ್ಪರಾಜ್ ಅವರಿಗೆ ಚೂರಿ ಇರಿದ ದುಷ್ಕರ್ಮಿಯನ್ನು ಶೀಘ್ರ ಬಂಧಿಸಿ ಕಠಿನ ಶಿಕ್ಷೆ ವಿದಿಸಿಬೇಕೆಂದು ಪೋಲೀಸ್ ಇಲಾಖೆಯಲ್ಲಿ ಒತ್ತಾಯಿಸಿದೆ.
Be the first to comment on "ಜಕ್ರಿಬೆಟ್ಟು: ಚೂರಿ ಇರಿತ ಪ್ರಕರಣ, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ, ಗಾಯಾಳು ಭೇಟಿ ಮಾಡಿದ ಶಾಸಕ ರಾಜೇಶ್ ನಾಯ್ಕ್"