ಜಿಲ್ಲಾ ಸುದ್ದಿ

ಕಿನ್ನಿಗೋಳಿ, ಮೂಡುಬಿದ್ರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಕಾಲ್ನಡಿಗೆಯಲ್ಲಿ ಪ್ರಚಾರ, ಶಾಸಕ ಉಮಾನಾಥ ಕೋಟ್ಯಾನ್ ಸೇರಿ ಕಾರ್ಯಕರ್ತರ ಸಾಥ್

ಜಾಹೀರಾತು

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮೂಲ್ಕಿ- ಮೂಡುಬಿದ್ರೆ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ನಡೆಸಿದ್ದಾರೆ. ಅಭ್ಯರ್ಥಿಯಾದ ಬಳಿಕ ಚೌಟ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಸಂಚಾರ ನಡೆಸಿದ್ದು, ಹಳೆಯಂಗಡಿ, ಕಿನ್ನಿಗೋಳಿ ಪೇಟೆ ಮತ್ತು ಮೂಡುಬಿದ್ರೆ ಪೇಟೆಯಲ್ಲಿ ಉದ್ದಕ್ಕೂ ಸಂಚರಿಸಿ ಅಂಗಡಿ, ಬೀದಿಗಳಲ್ಲಿ ಜನರ ಬಳಿ ಮತಯಾಚನೆ ಮಾಡಿದ್ದಾರೆ.
ಬೆಳಗ್ಗೆ ತೋಕೂರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ ಬ್ರಿಜೇಶ್ ಚೌಟ, ಬಿಜೆಪಿ ಕಾರ್ಯಕರ್ತರ ಜೊತೆಗೆ ದೇವರಲ್ಲಿ ಪ್ರಾರ್ಥಿಸಿ ಮತಯಾಚನೆಗೆ ತೊಡಗಿದ್ದಾರೆ. ಬಳಿಕ ಹಳೆಯಂಗಡಿ ಮತ್ತು ಕಿನ್ನಿಗೋಳಿ ಪೇಟೆಯಲ್ಲಿ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಬಿಜೆಪಿ ಪ್ರಮುಖರ ಜೊತೆಗೆ ಸಂಚರಿಸಿದ ಚೌಟ  ಮತದಾರರೊಂದಿಗೆ ಬೆರೆತರು.  ಬಳ್ಕುಂಜೆ ವಿಠೋಧರ ಮಂದಿರ, ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿಯಿತ್ತು ವಿಶೇಷ ಪ್ರಾರ್ಥನೆ ನೆರವೇರಿಸಿದರು.
ಸಂಜೆಯ ವೇಳೆಗೆ ಮೂಡುಬಿದ್ರೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪ್ರಮುಖರೊಂದಿಗೆ ಕಾಲ್ನಡಿಗೆಯಲ್ಲಿ ಸಂಚರಿಸಿದ್ದು, ಪ್ರತಿ ಮತದಾರರಿಗೂ ಕೈಕುಲುಕಿ ಮತ ನೀಡುವಂತೆ ಕೇಳಿಕೊಂಡಿದ್ದಾರೆ. ದೇಶಕ್ಕಾಗಿ ಮತ ನೀಡಿ, ನಿಮ್ಮ ಪ್ರತಿ ಮತವೂ ದೇಶದ ಭವಿಷ್ಯ ನಿರ್ಣಯಿಸುತ್ತದೆ ಎಂದು ಹೇಳಿದರು.  ಪ್ರತಿ ಅಂಗಡಿ, ಮಳಿಗೆಗೂ ತೆರಳಿ ಬ್ರಿಜೇಶ್ ಚೌಟ ಮತಯಾಚನೆ ಮಾಡಿದರು. ಮೂಡುಬಿದ್ರೆ ಪೇಟೆಯಲ್ಲಿ ಉದ್ದಕ್ಕೂ ಯುವಕರು ಸಾಥ್ ಕೊಟ್ಟಿದ್ದು, ಜೈಕಾರದ ಘೋಷಣೆ ಕೂಗಿದರು. ಕಿನ್ನಿಗೋಳಿಯಲ್ಲಿ ಸ್ಥಳೀಯ ಮುಖಂಡ ಈಶ್ವರ್ ಕಟೀಲ್ ನೇತೃತ್ವದಲ್ಲಿ ಮಹಿಳೆಯರು, ಸ್ಥಳೀಯ ಕಾರ್ಯಕರ್ತರು ಹಾಜರಿದ್ದರು.
ಸಂಜೆಯ ಬಳಿಕ ಬೆಳುವಾಯಿ ನಡ್ಡೋಡಿಗೆ ತೆರಳಿ ಜನರಲ್ಲಿ ಮತಯಾಚನೆ ಮಾಡಿದ್ದಾರೆ. ಆನಂತರ, ಶಿರ್ತಾಡಿಯ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನ, ಇರುವೈಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವರ ಆಶೀರ್ವಾದ ಕೋರಿದರು. ದೇವಸ್ಥಾನ ಭೇಟಿಗೈದ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಸಾಥ್ ನೀಡಿದರು. ಎಲ್ಲ ಕಡೆಯೂ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರ ಜೊತೆಗಿದ್ದು ಬಿರುಸಿನ ಮತಪ್ರಚಾರ ಕೈಗೊಂಡಿದ್ದಾರೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.