ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ:  ಉದ್ಯೋಗ ಸೃಷ್ಟಿ, ಆರೋಗ್ಯ ಸೇವೆಗೆ ಆದ್ಯತೆ – ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಜಾಹೀರಾತು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು.

ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು. ಪುತ್ತೂರು ಪೇಡೆಯಾದ್ಯಂತ ಸಂಚರಿಸಿದ ರೋಡ್ ಶೋ, ವಿಟ್ಲ ಬಸ್ ನಿಲ್ದಾಣದಲ್ಲಿ ಸಮಾಪನಗೊಂಡಿತು. ಬಳಿಕ ವಿಟ್ಲ ಸಂತೆ ಮಾರುಕಟ್ಟೆಗೆ ತೆರಳಿ ಮತ ಯಾಚನೆ ನಡೆಸಿದರು.

ರೋಡ್ ಶೋ ಉದ್ದಕ್ಕೂ  ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಅಭ್ಯರ್ಥಿಗೆ ಸಾಥ್ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಮೂಲಸೌಕರ್ಯ ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡಿರುವುದು ಕಾಂಗ್ರೆಸ್ ಪಕ್ಷದ ಸಂಸದರು. ಆದರೆ ಮತ್ತೆ ಅಧಿಕಾರಕ್ಕೆ ಬಂದ ಬಿಜೆಪಿ ಸಂಸದರು, ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಿಲ್ಲ. ಕನಿಷ್ಠ, ಕಾಂಗ್ರೆಸ್ ಸಂಸದರು ನೀಡಿದ ಅಭಿವೃದ್ಧಿ ಕೊಡುಗೆಗಳನ್ನು ಇನ್ನಷ್ಟು ಉನ್ನತೀಕರಿಸುವ ಕೆಲಸವನ್ನೂ ಮಾಡಿಲ್ಲ. ಆದರೆ ಕಾಂಗ್ರೆಸ್ ನೀಡಿದ ಆಶ್ವಾಸನೆಗಳನ್ನು ಈಡೇರಿಸಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡಿ ತೋರಿಸಿದೆ. ಮುಂದೆ ಚುನಾವಣೆಯಲ್ಲಿ ಜಯ ಗಳಿಸಿದ ನಂತರ ಉದ್ಯೋಗ ಸೃಷ್ಟಿ, ಆರೋಗ್ಯ ಸೇವೆಗೆ ಆದ್ಯತೆ ನೀಡಲಾಗುವುದು ಎಂದು ಈ ಸಂದರ್ಭ ಪದ್ಮರಾಜ್ ಹೇಳಿದರು.


ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡಿ ಕಾಂಗ್ರೆಸ್ ಜನಪರ, ಅಭಿವೃದ್ಧಿ ಪರ ಸರಕಾರ ಎಂಬುದನ್ನು ರಾಜ್ಯ ಸರಕಾರ ನಿರೂಪಿಸಿ ತೋರಿಸಿದೆ. ಈ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಮತವಾಗಿ ಪರಿವರ್ತನೆ ಆಗಲಿದೆ ಎಂದರು.

ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ:


ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಅರಮನೆ, ವಿಟ್ಲ ಕೇಂದ್ರ ಜುಮ್ಮಾ ಮಸೀದಿ, ವಿಟ್ಲ ಶೋಕಮಾತಾ ದೇವಾಲಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಆಶೀರ್ವಾದ ಪಡೆದರು.

ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಉಸ್ತುವಾರಿ ರಮನಾಥ ವಿಟ್ಲ, ಕಾವು ಹೇಮನಾಥ ಶೆಟ್ಟಿ, ವಿಟ್ಲ ಅರಮನೆಯ ಕೃಷ್ಣಯ್ಯ, ಜಯಪ್ರಕಾಶ್ ಬದಿನಾರು, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಪಿ., ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಕೆಪಿಸಿಸಿ ಸದಸ್ಯ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ವಿಜಯ ಕುಮಾರ್ ಆಳ್ವ, ವೇದನಾಥ ಸುವರ್ಣ, ಮಸೀದಿ ಸದರ್ ಅಬ್ದುಲ್ಲಾ ದಾರಿಮಿ, ವಿಟ್ಲ ಜಮಾತ್ ಅಧ್ಯಕ್ಷ ಮಹಮ್ಮದ್ ಅಶ್ರಫ್ ಪೊನ್ನೊಟ್ಟು, ಕಮಿಟಿ ಸದಸ್ಯ ರಶೀದ್ ವಿಟ್ಲ, ಅಜೀಜ್ ಹಳೆಮನೆ, ಮಹಮ್ಮದ್ ಇಕ್ಬಾಲ್, ವಿ.ಕೆ. ಹಂಝ, ನಜೀರ್ ಮಠ, ಚರ್ಚ್ ಧರ್ಮಗುರು ಐವನ್ ಮೈಕಲ್ ರೋಡ್ರಿಗಸ್, ವಿಜಯ್ ಪಾಯಸ್ ಥೋಮಸ್ ಮಸ್ಕರೇನಸ್, ಲೂಯಿಸ್ ಮಸ್ಕರೇನಸ್, ಜೆಸಿಂತಾ ರೊಡ್ರಿಗಸ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ:  ಉದ್ಯೋಗ ಸೃಷ್ಟಿ, ಆರೋಗ್ಯ ಸೇವೆಗೆ ಆದ್ಯತೆ – ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*