ಬಂಟ್ವಾಳ

ಮನೆಯಲ್ಲೇ ಮತದಾನದ ಹಕ್ಕು ಚಲಾಯಿಸಿದ ಹಿರಿಯ ರಾಜಕಾರಣಿ ಜನಾರ್ದನ ಪೂಜಾರಿ

ಜಾಹೀರಾತು

ಹಿರಿಯ ರಾಜಕಾರಣಿ, ಕೇಂದ್ರ ಮಾಜಿ ಸಚಿವ 87ರ ಹರೆಯದ ಬಿ.ಜನಾರ್ದನ ಪೂಜಾರಿ ಬಂಟ್ವಾಳದಲ್ಲಿರುವ ತಮ್ಮ ಮನೆಯಲ್ಲಿ ಲೋಕಸಭೆ ಚುನಾವಣೆಗೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷಕ್ಕೆ ಮೇಲ್ಪಟ್ಟವರಿಗೆ ಮತಗಟ್ಟೆ ಅಧಿಕಾರಿಗಳ ತಂಡ ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ನಡೆಯುತ್ತಿದೆ.

ಸೆಕ್ಟರ್ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ, ಮನೆಗಳಿಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ಏಪ್ರಿಲ್ 15ರಂದು ಆರಂಭಗೊಂಡಿದ್ದು, ಇದರ ಅನ್ವಯ ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರ ಬಿ ಮೂಡ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸಲಾಯಿತು. ಇದುವರೆಗೂ ಪೂಜಾರಿ ಅವರು ಬಂಟ್ವಾಳದ ಭಂಡಾರಿಬೆಟ್ಟು ಶಾಲೆಯ ಭಾಗ ಸಂಖೈ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಜನಾರ್ದನ ಪೂಜಾರಿ ಅವರು ಮತವನ್ನು ಮನೆಯಲ್ಲೇ ಚಲಾಯಿಸುತ್ತಿದ್ದು, ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಅವರು ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts