85ಕ್ಕೂ ಮೇಲ್ಪಟ್ಟವರು, ವಿಕಲಚೇತನರಿಗೆ ಮತದಾನ: ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಮಾಡಿದವರೆಷ್ಟು?

ಜಾಹೀರಾತು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಲೋಕಸಭಾ ಚುನಾವಣೆಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ಶೇ. 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯ ಹೊಂದಿರುವ ವಿಶೇಷ ಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ಒಟ್ಟು 8,010 ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿರುತ್ತಾರೆ. ಈ ಪೈಕಿ 5,011 ಹಿರಿಯ ನಾಗರಿಕರು ಹಾಗೂ 1,647 ವಿಶೇಷ ಚೇತನರು ಸೇರಿ ಒಟ್ಟು 6,658 ಮತದಾರರು ಈ ದಿನದವರೆಗೆ ಮತ ಚಲಾಯಿಸಿರುತ್ತಾರೆ.
ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಮನೆಯಲ್ಲಿಯೇ ಮತದಾನ ಮಾಡುವ ಪ್ರಕ್ರಿಯೆಯನ್ನು ಆಯ್ಕೆ ಮಾಡಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ.
2024 ರ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರು ಮತಗಟ್ಟೆಗೆ ತೆರಳಿ ಮತ ಚಲಾಯಿಸುವುದರ ಬದಲಿಗೆ ಮನೆಯಲ್ಲಿಯೇ ತಮಗೆ ಮತದಾನದ ಅವಕಾಶವನ್ನು ನೀಡಿದ್ದಕ್ಕಾಗಿ ತಮ್ಮ ಸಂತಸವನ್ನು ಹಂಚಿಕೊಂಡಿರುತ್ತಾರೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ‌ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಆನಂದ್ ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "85ಕ್ಕೂ ಮೇಲ್ಪಟ್ಟವರು, ವಿಕಲಚೇತನರಿಗೆ ಮತದಾನ: ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಮಾಡಿದವರೆಷ್ಟು?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*