ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಏ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ ತಾಲೂಕು ವ್ಯಾಪ್ತಿಯ 249 ಮತಗಟ್ಟೆಗಳಲ್ಲಿ ಬೆಳಗ್ಗೆ 8 ಗಂಟೆಗೆ ಏಕಕಾಲಕ್ಕೆ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಧ್ವಜಾರೋಹಣ, ಮತಗಟ್ಟೆ ಸುತ್ತಮುತ್ತ ಸ್ವಚ್ಛತೆ, ಪ್ರತಿಜ್ಞಾ ವಿಧಿ ಬೋಧನೆ ನಡೆಯಲಿದೆ.
ಬಂಟ್ವಾಳ ಪುರಸಭೆ ವ್ಯಾಪ್ತಿಯ ಪಾಣೆಮಂಗಳೂರು ಮತಗಟ್ಟೆ 152ರಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಾಥಾ, ಧ್ವಜಾರೋಹಣ, ಮತಗಟ್ಟೆ ಸುತ್ತಮುತ್ತ ಸ್ವಚ್ಛತೆ, ಪ್ರತಿಜ್ಞಾ ವಿಧಿ ಬೋಧನೆ ಮತ್ತು ಬೀದಿನಾಟಕ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳ ಪರಿಶೀಲನಾ ಕಾರ್ಯ ನಡೆಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಚುನಾವಣಾಧಿಕಾರಿ ಉದಯ್ ಶೆಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ನೋಡಲ್ ಅಧಿಕಾರಿ ರಾಹುಲ್ ಕಾಂಬಳೆ, ತಹಸೀಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಳೀಯ ಬಿಎಲ್‌ಒ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಇತರರು ಭಾಗವಹಿಸುವರು.
Be the first to comment on "ನಮ್ಮ ನಡೆ, ಮತಗಟ್ಟೆಗಳ ಕಡೆ: ಸಿದ್ಧತೆ ಪರಿಶೀಲನೆ"