ನಮ್ಮ ನಡೆ, ಮತಗಟ್ಟೆಗಳ ಕಡೆ: ಸಿದ್ಧತೆ ಪರಿಶೀಲನೆ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಏ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ ತಾಲೂಕು ವ್ಯಾಪ್ತಿಯ 249 ಮತಗಟ್ಟೆಗಳಲ್ಲಿ ಬೆಳಗ್ಗೆ 8 ಗಂಟೆಗೆ ಏಕಕಾಲಕ್ಕೆ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಧ್ವಜಾರೋಹಣ, ಮತಗಟ್ಟೆ ಸುತ್ತಮುತ್ತ ಸ್ವಚ್ಛತೆ, ಪ್ರತಿಜ್ಞಾ ವಿಧಿ ಬೋಧನೆ ನಡೆಯಲಿದೆ.

ಜಾಹೀರಾತು

ಬಂಟ್ವಾಳ ಪುರಸಭೆ ವ್ಯಾಪ್ತಿಯ ಪಾಣೆಮಂಗಳೂರು ಮತಗಟ್ಟೆ 152ರಲ್ಲಿ  ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು,  ಜಾಥಾ, ಧ್ವಜಾರೋಹಣ, ಮತಗಟ್ಟೆ ಸುತ್ತಮುತ್ತ ಸ್ವಚ್ಛತೆ, ಪ್ರತಿಜ್ಞಾ ವಿಧಿ ಬೋಧನೆ ಮತ್ತು ಬೀದಿನಾಟಕ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳ ಪರಿಶೀಲನಾ ಕಾರ್ಯ ನಡೆಯಿತು.

ಜಾಹೀರಾತು

ಕಾರ್ಯಕ್ರಮದಲ್ಲಿ ಸಹಾಯಕ ಚುನಾವಣಾಧಿಕಾರಿ ಉದಯ್ ಶೆಟ್ಟಿ,  ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ನೋಡಲ್ ಅಧಿಕಾರಿ ರಾಹುಲ್ ಕಾಂಬಳೆ, ತಹಸೀಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಳೀಯ ಬಿಎಲ್‌ಒ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಇತರರು ಭಾಗವಹಿಸುವರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಮ್ಮ ನಡೆ, ಮತಗಟ್ಟೆಗಳ ಕಡೆ: ಸಿದ್ಧತೆ ಪರಿಶೀಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*