ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿದರು.
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಪ್ರಚಾರ ಉಸ್ತುವಾರಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಜೊತೆಗಿದ್ದು, ಮಾತುಕತೆ ನಡೆಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಕೆಪಿಸಿಸಿ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಪ್ರಮುಖರಾದ ಪದ್ಮಶೇಖರ್ ಜೈನ್, ಅಬ್ಬಾಸ್ ಅಲಿ,ವಿನಯರಾಜ್, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಪದ್ಮನಾಭ ರೈ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್ ಹಾಗೂ ಜಯಂತಿ ವಿ ಪೂಜಾರಿ, ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಸಂಜೀವ ಪೂಜಾರಿ ಬಿರ್ವ, ಮಲ್ಲಿಕಾ ವಿ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ"