ಮಾಜಿ ಮೇಯರ್ ಕವಿತಾ ಸನಿಲ್ ಶನಿವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಬಂಟ್ವಾಳದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿಯಲ್ಲಿ ಕವಿತಾ ಸನಿಲ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಮಂಗಳೂರು ಮನಪಾ ಮೇಯರ್ ಆಗಿ ಜನಪ್ರಿಯತೆ ಗಳಿಸಿದ್ದ ಕವಿತಾ ಸನಿಲ್ ಅವರು, ಅಂತರಾಷ್ಟ್ರೀಯ ಮಟ್ಟದ ಖ್ಯಾತ ಕರಾಟೆ ಪಟುವಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ, ತಾನು ಸಿದ್ಧಾಂತವನ್ನು ಒಪ್ಪಿಕೊಂಡು ಇಂದು ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ಇಂದು ನಾನು ಬಿಜೆಪಿ ಸೇರ್ಪಡೆ ಆಗುತ್ತೇನೆಂದು ತಾನು ಯಾರಲ್ಲೂ ಹೇಳಿಲ್ಲ. ಆದರೆ ನನ್ನ ರಾಜಕೀಯ ಗುರು, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರಿಗೆ ತಿಳಿಸಿ ಅವರ ಆಶೀರ್ವಾದ ಪಡೆದು ಬಂದಿದ್ದೇನೆ. ಅವರು ತನ್ನ ಭವಿಷ್ಯ ಉಜ್ವಲವಾಗಲಿ ಎಂದು ಆಶೀರ್ವದಿಸಿ ಹರಸಿದ್ದಾರೆ ಎಂದು ಕವಿತಾ ಸನಿಲ್ ಹೇಳಿದರು.ಇವತ್ತು ನಮ್ಮ ಧರ್ಮ ಉಳಿದ ಮೇಲೆ ಜಾತಿ ಉಳೀತದೆ, ಹಿಂದುವಾಗಿ, ಧರ್ಮ ಉಳೀಬೇಕು ಎಂಬ ದೃಷ್ಟಿಯಿಂದ ಬಿಜೆಪಿ ಸೇರಿದ್ದೇನೆ ಎಂದು ಹೇಳಿದ ಕವಿತಾ ಸನಿಲ್, ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿ ಸೇರಿದೆ ಎಂದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…